ವಿದ್ಯಾಗಮ ಯೋಜನೆಯನ್ನು ಪರಿಷ್ಕೃತ ರೂಪದಲ್ಲಿ ರಾಜ್ಯ ಸರ್ಕಾರ ಪುನಃ ಆರಂಭಿಸುತ್ತಿದೆ.

0

ಬೆಂಗಳೂರು : ಶಿಕ್ಷಕರಿಗೆ ಕೊರೊನಾ ತಗುಲುತ್ತಿರುವುದರಿಂದ  ಆಗಸ್ಟ್ 10 ರಿಂದ ಸ್ಥಗಿತಗೊಂಡ ವಿದ್ಯಾಗಮ ಯೋಜನೆಯನ್ನು ಪರಿಷ್ಕೃತ ರೂಪದಲ್ಲಿ ರಾಜ್ಯ ಸರ್ಕಾರ ಪುನಃ ಆರಂಭಿಸುತ್ತಿದೆ.

ಪರಿಷ್ಕೃತ ರೂಪದಲ್ಲಿ ವಿದ್ಯಾಗಮ ಜಾರಿಗೊಳಸಲಾಗುತ್ತಿದೆ. ವಿದ್ಯಾಗಮ ಸ್ಥಗಿತದಿಂದ ಮಕ್ಕಳಿಗೆ ತೊಂದರೆಯಾಗಿದೆ. ಕೆಲಸಗಳಿಗೆ ತೆರಳುವುದು, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ದತಿಗೆ ಒಳಗಾಗುತ್ತಿದ್ದಾರೆ.

ತಜ್ಞರಿಂದ ಮಕ್ಕಳ ಹಕ್ಕು ಆಯೋಗಕ್ಕೆ ದೂರು ನೀಡಿದ್ದಾರೆ. ಹೀಗಾಗಿ ಸುರಕ್ಷಾ ಕ್ರಮಗಳೊಂದಿಗೆ ವಿದ್ಯಾಗಮ ಜಾರಿಗೊಳಸಲಾಗುತ್ತದೆ.

ಕೋವಿಡ್ ಮಾರ್ಗಸೂಚಿಯಂತೆ ವಿದ್ಯಾಗಮ ಕಾರ್ಯಕ್ರಮ ಪುನರಾರಂಭಿಸಲಾಗುತ್ತದೆ  ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ಚಂದನ ವಾಹಿನಿ ಕ್ಲಾಸ್ ಗಳು ಎಂದಿನಂತೆ ನಡೆಯಲಿವೆ ಎಂದು ತಿಳಿಸಿದ್ದಾರೆ.