14 ವರ್ಷದ ಅಪ್ರಾಪ್ತ ವಿಕಲಚೇತನ ಯುವತಿ ಮೇಲೆ 52 ವರ್ಷದ ವ್ಯಕ್ತಿ ಅತ್ಯಾಚಾರ ತಡವಾಗಿ ಬೆಳಕಿಗೆ ಬಂದಿದೆ. 

0

ವಿಜಯಪುರ: 14 ವರ್ಷದ ಅಪ್ರಾಪ್ತ ವಿಕಲಚೇತನ ಯುವತಿ ಮೇಲೆ 52 ವರ್ಷದ ವ್ಯಕ್ತಿ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿ ಬಿದಿದ್ದರುವ ಘಟನೆ
ಮುದ್ದೇಬಿಹಾಳ ತಾಲೂಕು ನಡಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 


ಸಂತ್ರಸ್ತೆ ಪೋಷಕರು ದೂರು ನೀಡಿದರೂ ಪೊಲೀಸರು ರಾಜಿ ಸಂಧಾನ ಮಾಡಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಆರೋಪವೂ ಕೇಳಿ ಬಂದಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದಿದ್ದಾಗ ವಿಕಲಚೇತನರು ಪ್ರತಿಭಟಿಸಿ, ದೂರು ದಾಖಲಾಗುವಂತೆ ಮಾಡಿದ್ದಾರೆ.

14 ವರ್ಷದ ಬುದ್ಧಿಮಾಂದ್ಯತೆ ಬಾಲಕಿ ಮೇಲೆ ಸೋಮವಾರ ರುದ್ರಗೌಡ ಪಾಟೀಲ (52) ಎಂಬಾತ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ. ಬಾಲಕಿ ಕಿರುಚಿಕೊಂಡಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದು, ತಾಳಿಕೋಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಆದ್ರೆ   ಪಿಎಸ್ ಐ ಗಂಗೂಬಾಯಿ ಬಿರಾದಾರ ಪ್ರಕರಣ ದಾಖಲಿಸಿಕೊಳ್ಳದೇ ರಾಜೀ ಸಂಧಾನ ಮಾಡಿ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾರೆ.

ವಿಷಯ ತಿಳಿದು ಸಂತ್ರಸ್ತೆಯ ಪೋಷಕರು ಗಂಗೂಬಾಯಿ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಘಟನೆಯ ಕುರಿತು ವಿಕಲಚೇತನರು ವಿಕಲಚೇತನರ ಸಬಲೀಕರಣ ಇಲಾಖೆ ಜಿಲ್ಲಾ ಅಧಿಕಾರಿ ಉಪಾಧ್ಯೆ ಅವರ ಗಮನಕ್ಕೆ ತಂದಿದ್ದು, ಮಂಗಳವಾರ ಸಂಜೆ ಪೊಲೀಸ್ ಠಾಣೆಗೆ ಆಗಮಿಸಿ ಕೇಸು ದಾಖಲಿಸಿಕೊಳ್ಳುವಂತೆ ಒತ್ತಡ ಹೇರಿದ್ದಾರೆ.

ಅಲ್ಲದೇ ಸ್ಯಳೀಯರಿಂದ ಪ್ರಕರಣದ ಮಾಹಿತಿ ಪಡೆದುಕೊಂಡಿದ್ದರು.

ಪ್ರಕರಣ ಗಂಭೀರ ಸ್ವರೂಪ ಪಡೆದರು ಕೂಡ  ಪಿಎಸ್ಐ ಗಂಗೂಬಾಯಿ ವಿಕಲಚೇತನೆಯ ಮೇಲೆ ಅತ್ಯಾಚಾರ ಯತ್ನ ನಡೆದಿಲ್ಲ ಎಂದು ವಾದಿಸಿದ್ದಾರೆ. ಇದಲ್ಲದೇ ಪಾಲಕರ ಮೇಲೆ ಒತ್ತಡ ಹೇರಿ ಠಾಣೆಯಲ್ಲಿ ಬರೆಸಿಕೊಂಡಿದ್ದ ಪತ್ರವನ್ನು ಉಪಾಧ್ಯೆ ಅವರಿಗೆ ತೋರಿಸಿ ಪ್ರಕರಣ ಮುಚ್ಚಿ ಹಾಕುವ ಯತ್ನ ಮಾಡಿದ್ದರು.

ಪೊಲೀಸರು ದೂರು ದಾಖಲೊಸಿಕೊಳ್ಳದ ಕ್ರಮದ ವಿರುದ್ಧ ವಿಕಲಚೇತನರು ತಮ್ಮ ಸಂಘಟನೆ ಪದಾಧಿಕಾರಿಗಳು ಸೇರಿ ಪ್ರತಿಭಟಿಸುವ ಎಚ್ಚರಿಕೆ ನೀಡಿದ್ದಾರ.  ಪರಿಸ್ಥಿತಿ ಕೈ ಮೀರುವುದನ್ನು ಅರಿತು, ಎಚ್ಚೆತ್ತ ಇಲಾಖೆ ಅಧಿಕಾರಿಗಳು ದೂರು ದಾಖಲಿಸಲು ಮುಂದಾಗಿದ್ದಾರೆ.

ವಿಕಲಚೇತನರ ಸಬಲೀಕರಣ ಅಧಿಕಾರಿ ಉಪಾಧ್ಯೆ, ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣೆ ಅಧಿಕಾರಿ ನಿರ್ಮಲಾ ಸುರಪೂರ ಸ್ಥಳದಲ್ಲೇ ಬಿಡಾರ ಹೂಡಿದ್ದಾರೆ.

ಸದ್ಯ ಪ್ರಕರಣ ದಾಖಲಾಗಿದ್ದು, ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾಗಿ ಉಪಾಧ್ಯೆ ತಿಳಿಸಿದ್ದಾರೆ.