ಗ್ರಾಮ ಪಂಚಾಯತಿ ಚುನಾವಣೆ: ಸಿದ್ಧತೆ ಪರಿಶೀಲನೆ ———————————————– ನಿಯಮಾವಳಿ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ

0

 

ಬೆಳಗಾವಿ, ಡಿ.17: ಗ್ರಾಮ ಪಂಚಾಯತಿ ಚುನಾವಣೆಗೆ ನಿಯೋಜಿತರಾಗಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ನೀಡಿದರು.
ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿರುವ ತರಬೇತಿ ಕೇಂದ್ರಗಳಿಗೆ ಗುರುವಾರ (ಡಿ.17) ಭೇಟಿ ನೀಡಿ ಅವರು ಮಾತನಾಡಿದರು.
ಚುನಾವಣಾ ಪ್ರಕ್ರಿಯೆಗಳ ಕುರಿತು ಸಂದೇಹಗಳಿದ್ದರೆ ಸಂಬಂಧಿಸಿದ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಪರಿಹರಿಸಿಕೊಳ್ಳಬೇಕು.
ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸುವ ಮೂಲಕ ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯುವಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಕಿತ್ತೂರು, ಬೈಲಹೊಂಗಲ, ಗೋಕಾಕ, ಮೂಡಲಗಿ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ, ತರಬೇತಿ ನಿರತ ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.
ಇದೇ ವೇಳೆ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಸಿದ್ಧತೆಗಳನ್ನು ಪರಿಶೀಲಿಸಿದರು.
ಗೋಕಾಕ ಮತ್ತು ಮೂಡಲಗಿ ಕೇಂದ್ರಗಳಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಲಕ್ಷ್ಮಣ ನಿಂಬರಗಿ, ಉಳಿದ ಕಡೆಗಳಲ್ಲಿ ಬೈಲಹೊಂಗಲ ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರು ಉಪಸ್ಥಿತರಿದ್ದರು.

 

ಡಿ.19 ಕ್ಕೆ ಬೃಹತ್ ಲೋಕ ಅದಾಲತ್


ಬೆಳಗಾವಿ, ಡಿ.17 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ಜಿಲ್ಲಾಡಳಿತ, ಪೆÇಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಸಂಘ ಬೆಳಗಾವಿ ಸಂಯುಕ್ತ ಆಶ್ರಯದಲ್ಲಿ ಶನಿವಾರ ಡಿಸೆಂಬರ್ 19 ರಂದು ನಗರದ ಹೊಸ ನ್ಯಾಯಾಲಯಗಳ ಸಂಕೀರ್ಣ ಎ. ಡಿ. ಆರ್. ಕಟ್ಟಡ ದಲ್ಲಿ ಬ್ರಹತ್ ಲೋಕ ಅದಾಲತ್ ಜರುಗಲಿದೆ.
ಬೆಳಿಗ್ಗೆ 11ಗಂಟೆಗೆ ನ್ಯಾಯಿಕ ಸಂಧಾನ ಕಾರರಗಿ ಮಾನ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಸಿ ಎಂ ಜೋಶಿ ಹಾಗೂ ಸಂಧಾನ ಕಾರರು ಆಗಿ ಮಾನ್ಯ ಪೆÇಲೀಸ ಆಯುಕ್ತರಾದ ಡಾ ಕೆ. ತ್ಯಾಗರಾಜನ್ ಭಾಗವಹಿಸಲಿದ್ದಾರೆ. 12 ಗಂಟೆಗೆ ನ್ಯಾಯಿಕ ಸಂಧಾನ ಕಾರರಗಿ ಮಾನ್ಯ 3 ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಎಮ್. ಎಚ. ಅಣ್ಣಯ್ಯನವರ ಹಾಗೂ ಸಂಧಾನ ಕಾರರಾಗಿ ಜಿಲ್ಲಾಧಿಕಾರಿಗಳು ಭಾಗವಹಿಸಲಿದ್ದಾರೆ