2020-21 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ

0

ಬೆಳಗಾವಿ, ಡಿ.16 a: ಜಿಲ್ಲೆಯ ಎಲ್ಲಾ ರೈತರು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಯೋಜನೆಯಲ್ಲಿ ಈಗಾಗಲೇ ಪಾಲ್ಗೊಂಡಂತೆ ಪ್ರಸಕ್ತ ಹಿಂಗಾರು ಹಂಗಾಮಿನಲ್ಲಿ ಸಹ ರೈತರು ತಮ್ಮ ಜಮೀನುಗಳಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ “ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್” ಮೂಲಕ ದಾಖಲಿಸುವ ಯೋಜನೆಯನ್ನು ಪ್ರಾರಂಭಿಸಲಾಗಿದೆ.

ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಹಾಗೂ ಸಾಂಖ್ಯಿಕ ಇಲಾಖೆಯ ಜಂಟಿ ಸಹಯೋಗದಲ್ಲಿ ಈ ಕಾರ್ಯ ನಡೆಯಲಿದ್ದು, ಸಂಗ್ರಹವಾದ ಬೆಳೆಗಳ ಮಾಹಿತಿಯನ್ನು ತಾಲೂಕ ಆಡಳಿತ ಪರಿಶೀಲಿಸಲಿದೆ.

ವಿಧಾನ: ರೈತರು ಸ್ಮಾರ್ಟಫೋನ್ ಉಪಯೂಗಿಸಿ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‍ನ್ನು ಗೂಗಲ್‍ನ “ಪ್ಲೇ ಸ್ಟೋರ್ (Pಟಚಿಥಿ Sಣoಡಿe)” ನಿಂದ ಡೌನಲೋಡ್ ಮಾಡಿಕೊಳ್ಳಬಹುದಾಗಿದೆ ಅಥವಾ ರೈತರ ಪರವಾಗಿ ಅವರ ಕುಟುಂಬದ ಸದಸ್ಯರು,

ಸಂಬಂಧಿಕರು ಅಥವಾ ಮೊಬೈಲ್ ಮಾಹಿತಿ ಹೊಂದಿರುವ ಕಂದಾಯ/ಕೃಷಿ ಇಲಾಖೆ ವತಿಯಿಂದ ನಿಯೋಜನೆಗೊಂಡ ತಮ್ಮದೆ ಗ್ರಾಮದ ಮಾಹಿತಿ ತಂತ್ರಜ್ಞಾನದ ಬಗ್ಗೆ ತಿಳುವಳಿಕೆ ಇರುವ ಯುವಕರ (ಖಾಸಗಿ ನಿವಾಸಿ/ಪಿ.ಆರ್) ಸಹಾಯದೂಂದಿಗೆ ರೈತರು ತಮ್ಮ ಮೊಬೈಲ್ ಸಂಖ್ಯೆಗೆ ಔಖಿP ಪಡೆಯುವ ಮೂಲಕ ತಮ್ಮ ಜಮೀನುಗಳಲ್ಲಿ (ಹಿಸ್ಸಾವಾರು) ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ಅಪಲೋಡ ಮಾಡಬಹುದಾಗಿದೆ.

ರೈತರು ನಿಗದಿತ ಸಮಯದೊಳಗೆ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಅಪ್ಲೋಡ್ ಮಾಡದೇ ಇದ್ದ ಪಕ್ಷದಲ್ಲಿ ಪ್ರತಿ ಗ್ರಾಮಕ್ಕೆ ನಿಯೋಜನೆಗೊಂಡ ಬೆಳೆ ಸಮೀಕ್ಷಕರು (ಖಾಸಗಿ ನಿವಾಸಿ/ಪಿ.ಆರ್) ತಮ್ಮ ಹೊಲಗಳಿಗೆ ಭೇಟಿ ನೀಡಿ ಮೊಬೈಲ್ ಆ್ಯಪ್ ಬಳಸಿ ಬೆಳೆ ಮಾಹಿತಿ ಸಂಗ್ರಹಿಸಿ ಅಪಲೋಡ್ ಮಾಡುತ್ತಾರೆ.

ಉದ್ದೇಶ: ಬೆಳೆ ಸಮೀಕ್ಷೆ ಯೋಜನೆಯಡಿ ಸಂಗ್ರಹವಾಗುವ ಮಾಹಿತಿ
ಸಾಂಖ್ಯಿಕ ಇಲಾಖೆಯ ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆ ವಿಸ್ತೀರ್ಣ ಏಣಿಕಾ ಕಾರ್ಯದಲ್ಲಿ ಬಳಸಲು ಅನುಮತಿಸಲಾಗಿದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಓಆಖಈ/Sಆಖಈ ಅಡಿಯಲ್ಲಿ ಸಹಾಯಧನ ನೀಡಲು ವರದಿ ತಯಾರಿಸಲಾಗುವದು.

ಹಾಗೂ ಬೆಳೆ ವಿಮೆ ಯೋಜನೆಯಡಿ ರೈತರ ತಾಲೂಕುವಾರು ಬೆಳೆ ಪರಿಶೀಲಿಸಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗುವದು, ಹಾಗೂ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕಾಗಿ.

  • ಅಲ್ಲದೆ ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಜಿಲ್ಲ್ಲೆಯ ಎಲ್ಲಾ ರೈತರು ರೈತರು ತಮ್ಮ ಜಮೀನುಗಳಲ್ಲಿ (ಹಿಸ್ಸಾವಾರು) ತಾವು ಬೆಳೆದ ಹಿಂಗಾರು ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‍ನಲ್ಲಿ ನಿಗದಿತ ಸಮಯದೊಳಗೆ ಅಪ್ಲೋಡ್ ಮಾಡಿ ಕಡ್ಡಾಯವಾಗಿ ಬೆಳೆ ಸಮೀಕ್ಷೆ ಯೋಜನೆಯಲ್ಲಿ ಭಾಗವಹಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.