ಬುಧವಾರ ತಡರಾತ್ರಿ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

0

ಬೆಳಗಾವಿ, ಡಿ. 17- ನಗರದ ಹಳೆ ಬೆಳಗಾವಿ ಪ್ರದೇಶದ ಅಂಬೇಡ್ಕರ್‌ ಗಲ್ಲಿ ಸಮೀಪದ ಖಾಲಿ ಜಾಗದಲ್ಲಿ ಬುಧವಾರ ತಡರಾತ್ರಿ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಕೊಲೆಯಾದ ವ್ಯಕ್ತಿಯನ್ನು ಜಯಪಾಲ್‌ ಎಂ. ಗರಾಣಿ (35) ಎಂದು ಗೊತ್ತಾಗಿದೆ… ವೃತ್ತಿಯಲ್ಲಿ ಚಾಲಕರಾಗಿದ್ದು, ಅವರಿಗೆ ತಂದೆ, ತಾಯಿ, ಪತ್ನಿ, ಮೂವರು ಪುತ್ರರು ಇದ್ದಾರೆ.

ಸ್ಥಳಕ್ಕೆ ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟೀಮನಿ ಮತ್ತು ಶಹಾಪುರ ಸಿಪಿಐ ರಾಘವೇಂದ್ರ ಹವಾಲ್ದಾರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದರು.