ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆಗೆ ಎರಡು ಹೆಸರುಗಳನ್ನು ಅಂತಿಮ ಗೊಳಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದರು.

0

ಬೆಳಗಾವಿ, ಡಿ. 18 – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆಗೆ ಎರಡು ಹೆಸರುಗಳನ್ನು ಅಂತಿಮ ಗೊಳಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ನಗರದಲ್ಲಿ ಶುಕ್ರವಾರ ನಡೆದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಸಹೋದರಿ ಪುತ್ರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಎಲ್ಲ ನಾಯಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಅಗತ್ಯಬಿದ್ದರೆ ಮತ್ತೊಮ್ಮೆ ಸಭೆ ನಡೆಸುತ್ತೇವೆ. ಅನೇಕ ಆಕಾಂಕ್ಷಿಗಳು ಇದ್ದಾರೆ. ಆದರೆ ಅಂತಿ ಮಗೊಳಿಸುವ ಹೆಸರು ಹೇಳಲು ಅವರು ಬಯಸಲಿಲ್ಲ.

ಶಾಸಕ ಸತೀಶ್‌ ಜಾರಕಿಹೊಳಿ‌ ಅವರಿಗೆ ಟಿಕೆಟ್‌ ಕೊಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ, ‘ಸತೀಶ್ ಈ ಭಾಗದ ಪ್ರಮುಖ ನಾಯಕ, ನೋಡೋಣ’ ಎಂದಷ್ಟೇ ಪ್ರತಿಕ್ರಿಯಿಸಿದರು.
ಸುಕ್ಷೇತ್ರ ಮೈಲಾರಕ್ಕೆ ಹೆಲಿಕಾಪ್ಟರ್‌ನಲ್ಲಿ ಹೋಗಬಾರದಿತ್ತು ಎನ್ನುವುದು ಕಾರ್ಯಕರ್ತರ ಅಭಿಪ್ರಾಯವಾಗಿತ್ತು.

ಅದಕ್ಕಾಗಿ ಅಲ್ಲಿಗೆ ಹೋಗಿ ಹರಕೆ ತೀರಿಸಿ ಬಂದಿದ್ದೇ‌ನೆ. ನೆಮ್ಮದಿ, ಆರೋಗ್ಯ, ಅಧಿಕಾರ ನೀಡೆಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.