ಬೆಳಗಾವಿ ನಗರದಲ್ಲಿ ವಿವಿದೆಡೆ ಅಭಿವೃಧ್ದಿ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿದ ಶಾಸಕ ಅನಿಲ ಬೆನಕೆ:

0

ಬೆಳಗಾವಿ 18 : ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಬೆಳಗಾವಿ ನಗರದ ರಾಮತೀರ್ಥ ನಗರದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಹಾಗೂ ನಗರದ ಚೆನ್ನಮ್ಮ ವೃತ್ತದ ಮೀಲನ ಹೊಟೆಲ ಹತ್ತಿರದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ಸಲ್ಲಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ರಾಮತೀರ್ಥ ನಗರ ಬಡಾವಣೆಯಲ್ಲಿನ 4 ರಸ್ತೆಗಳ ಡಾಂಬರೀಕರಣಕ್ಕೆ ರೂ. 74 ಲಕ್ಷಗಳ ಸರ್ಕಾರದ ವಿಶೆಷ ಅನುದಾನದಡಿಯಲ್ಲಿ ಗಣೇಶ ವೃತ್ತದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ ಮಾಡಿ ಚಾಲನೆ ನೀಡಲಾಗಿದ್ದು,

ಇಲ್ಲಿನ ಸಾರ್ವಜನಿಕರು ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಗುತ್ತಿಗೆದಾರರಿಂದ ಉತ್ತಮ ರೀತಿಯಲ್ಲಿ ಮಾಡಿಕೊಳ್ಳಬೇಕೆಂದರು ಹಾಗೂ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕಾಮಗಾರಿಯಲ್ಲಿ ಗುಣಮಟ್ಟತೆಯನ್ನು ಕಾಯ್ದುಕೊಂಡು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸೂಚಿಸಿದರು.

ನಂತರದಲ್ಲಿ ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಮೀಲನ ಹೊಟೆಲ್ ಹತ್ತಿರದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ನಗರದ ಹೃದಯ ಭಾಗವಾದ ಚೆನ್ನಮ್ಮ ವೃತ್ತದಲ್ಲಿ ಸಾರ್ವಜನಿಕ ದಟ್ಟಣೆಯು ಹೆಚ್ಚಾಗಿ ಕಂಡು ಬರುವುದರಿಂದ ಸಾರ್ವಜನಿಕ ಉಪಯೋಗಕ್ಕಾಗಿ

ಮಹಾನಗರ ಪಾಲಿಕೆಯ ರೂ. 21 ಲಕ್ಷಗಳ ಅನುದಾನದಡಿಯಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಸಾರ್ವಜನಿಕರು ಇದರ ಉಪಯೋಗವನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದ ಅವರು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕರೊಂದಿಗೆ ಎಇಇ ನರಸನ್ನವರ, ಎಇ ಸರೋಜಾ ಬೆಣ್ಣಿ, ಎಇಇ ಸಚೀನ ಕಾಂಬಳೆ, ಮುಖಂಡರಾದ ಅಣ್ಣಾಸಾಹೇಬ ದೇಸಾಯಿ, ಈರಯ್ಯ ಖೋತ, ಮಹಾಂಲಿಂಗಪ್ಪ ತಂಗಡಗಿ, ಸುರೇಶ ಯಾದವ, ಗುತ್ತಿಗೆದಾರರಾದ ವಿಜಯ ಧಾಮಣೆಕರ, ಶ್ರೀನಿವಾಸ ಕುಲಕರ್ಣಿ ಹಾಗೂ ಇತರ ಸ್ಥಳಿಯರು ಉಪಸ್ಥಿತರಿದ್ದರು.