ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಗ್ರಾಮ ಪಂಚಾಯತಿ ಚುನಾವಣೆ: ಸಿಬ್ಬಂದಿಗೆ ತರಬೇತಿ

0

ಬೆಳಗಾವಿ, ಡಿ.18 : ಗ್ರಾಮ ಪಂಚಾಯತಿ ಚುನಾವಣೆ ಸಂದರ್ಭದಲ್ಲಿ ಗ್ರಾಮೀಣ ಮಟ್ಟದಲ್ಲಿ ಅತ್ಯಂತ ಪೈಪೆÇೀಟಿ ಕಂಡುಬರುವುದರಿಂದ ಅಧಿಕಾರಿಗಳು ಚುನಾವಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜತೆಗೆ ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ನೀಡಿದರು.

ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿರುವ ತರಬೇತಿ ಕೇಂದ್ರಗಳಿಗೆ ಶುಕ್ರವಾರ (ಡಿ.18) ಭೇಟಿ ನೀಡಿ ಅವರು ಮಾತನಾಡಿದರು.

ಚುನಾವಣಾ ಪ್ರಕ್ರಿಯೆಗಳ ಕುರಿತು ಈಗಾಗಲೇ ಅಗತ್ಯ ತರಬೇತಿ ನೀಡಲಾಗಿದೆ. ಈ ಕುರಿತು ಸಂದೇಹಗಳಿದ್ದರೆ ಸಂಬಂಧಿಸಿದ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಪರಿಹರಿಸಿಕೊಳ್ಳಬೇಕು.

ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸುವ ಮೂಲಕ ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಬೆಳಗಾವಿ, ಹುಕ್ಕೇರಿ ಮತ್ತು ಖಾನಾಪುರ ತಾಲ್ಲೂಕುಗಳ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ, ತರಬೇತಿ ನಿರತ ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಇದೇ ವೇಳೆ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಸಿದ್ಧತೆಗಳನ್ನು ಪರಿಶೀಲಿಸಿದರು.

ಬೆಳಗಾವಿ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪೆÇಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್ ಉಪಸ್ಥಿತರಿದ್ದರು.

ಖಾನಾಪುರ ತಾಲ್ಲೂಕಿನಲ್ಲಿ ಜಿಲ್ಲಾ  ಪೊಲೀಸ್ ವರಿಷ್ಠಾಧಿಕಾರಿಗಳು  ಲಕ್ಷ್ಮಣ ನಿಂಬರಗಿ ಮತ್ತು ಹುಕ್ಕೇರಿ ತಾಲ್ಲೂಕಿಗೆ ಭೇಟಿ ನೀಡಿದ ವೇಳೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು  ಅಮರನಾಥ್ ರೆಡ್ಡಿ, ಉಪ ವಿಭಾಗಾಧಿಕಾರಿ ಮತ್ತು ತಹಶೀಲ್ದಾರರು ಹಾಜರಿದ್ದರು.////

ಚುನಾವಣಾ ಕರ್ತವ್ಯ ನಿರ್ಲಕ್ಷಿಸಿದರೆ ಕಾನೂನು ಕ್ರಮ:
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಕೆ

ಬೆಳಗಾವಿ, ಡಿ.18 : ಗ್ರಾಮ ಪಂಚಾಯತಿ ಚುನಾವಣೆಗೆ ನಿಯೋಜಿಸಲಾಗಿರುವ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ತರಬೇತಿಯೂ ಸೇರಿದಂತೆ ಚುನಾವಣಾ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಚುನಾವಣಾ ತರಬೇತಿಗೆ ಗೈರುಹಾಜರಾಗಿರುವವರು ಕೂಡಲೇ ಆಯಾ ತಾಲ್ಲೂಕಿನ ತಹಶಿಲ್ದಾರರ ಬಳಿ ವರದಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಈಗಾಗಲೇ ಚುನಾವಣಾ ಪ್ರಕ್ರಿಯೆ ಕುರಿತು ತರಬೇತಿ ಆರಂಭವಾಗಿರುತ್ತದೆ.

ಚುನಾವಣಾ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ನಿರ್ಲಕ್ಷ್ಯ ತೋರಿದರೆ ಅಂತಹವರ ವಿರುದ್ಧ ನಿಯಮಾವಳಿ ಪ್ರಕಾರ ಶಿಸ್ತುಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಗ್ರಾಮ ಪಂಚಾಯತಿ ಚುನಾವಣೆಯನ್ನು ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.