ಪ್ರಕಟಣೆ

0

 

ಪ್ರಕಟಣೆ

ಬೆಳಗಾವಿ, ಡಿ.22 : ಚನ್ನಮ್ಮ ಕಿತ್ತೂರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಜಮೀನುಗಳ ಮಾಲಿಕರಿಗೆ ತಿಳಿಯಪಡಿಸುವುದೇನೆಂದರೆ 2020-21ನೇ ಸಾಲಿನ ಆಶ್ರಯ ಯೋಜನೆಗೆ 10 ಎಕರೆ ಜಮೀನ ನೀಡಲು ಇಚ್ಚಿಸುವವರು ಅರ್ಜಿಯನ್ನು ಸಲ್ಲಿಸಲು ಚನ್ನಮ್ಮ ಕಿತ್ತೂರು ಪಟ್ಟಣ ಪಂಚಾಯತ ಅಧ್ಯಕ್ಷರು ತಿಳಿಸಿದರು.
ಇಚ್ಚಿಸುವ ಮಾಲಿಕರು 100ರೂ ಛಾಪಾ ಕಾಗದ ಮೇಲೆ ಒಪ್ಪಿಗೆ ಪತ್ರವನ್ನು ಹಾಗೂ ಸದರಿ ಜಮೀನಿಗೆ ಸಂಬಂದಪಟ್ಟ ದಾಖಲಾತಿಗಳನ್ನು ಚನ್ನಮ್ಮ ಕಿತ್ತೂರ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಡಿ.27 ರೊಳಗಾಗಿ ಕಛೇರಿ ಸಮಯದಲ್ಲಿ ಸಲ್ಲಿಸಬಹುದು ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯದಲ್ಲಿ ಮುಖ್ಯಾಧಿಕಾರಿಗಳನ್ನು ಸಂಪರ್ಕಿಸಿ ಎಂದು ಚನ್ನಮ್ಮ ಕಿತ್ತೂರು ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ./////

ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ: ಡಿ.29 ಕ್ಕೆ ಮುಂದೂಡಿಕೆ

ಬೆಳಗಾವಿ, ಡಿ.22 : ಮಾಹೇಶ್ವರಿ ಅಂಧಮಕ್ಕಳ ಶಾಲೆಯ ಸಭಾಂಗಣದಲ್ಲಿ ನಿಗದಿಪಡಿಸಿದ್ದ 2020-21ನೇ ಸಾಲಿನ ಬೆಳಗಾವಿ ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ 24 ರಂದು ನಡೆಯಬೇಕಿದ್ದ ಕಾರ್ಯಕ್ರಮವನ್ನು ಮುಂದೂಡಿ ಮಂಗಳವಾರ (ಡಿ.29) ರಂದು ಮಹಾಂತೇಶನಗರ ಮಹಾಂತಭವನ ಇಲ್ಲಿ ಹಮ್ಮಿಕೊಳ್ಳಲಾಗಿರುತ್ತದೆ.
15 ರಿಂದ 29 ವರ್ಷದೊಳಗಿನ ಯುವಕ/ಯುವತಿಯರು ಡಿಸೆಂಬರ್ 29 ರಂದು ಬೆಳಿಗ್ಗೆ 9.30 ಗಂಟೆಗೆ ಬೆಳಗಾವಿಯ ಮಹಾಂತೇಶ ನಗರ ಮಹಾಂತ ಭವನ ಇಲ್ಲಿ ಹೆಸರುಗಳನ್ನು ನೋಂದಣಿ ಮಾಡಿಕೊಂಡು ಸ್ಪರ್ಧೆಗಳಲ್ಲಿ ಭಾಗವಹಿಸುವುದು. ಭಾಗವಹಿಸುವ ಸ್ಪರ್ಧಿಗಳು ಕೋವಿಡ್-19 ನಿಯಮಗಳನ್ನು ಪಾಲಿಸುವುದರೊಂದಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವುದು.
ಹೆಚ್ಚಿನ ವಿವರಗಳಿಗೆ ಶ್ರೀ ಬಸವರಾಜ ಜಕ್ಕನ್ನವರ ಇವರ ದೂರವಾಣಿ ಸಂಖ್ಯೆ: 7411144485 ಸಂಪರ್ಕಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪÀ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

 

ಅರ್ಜಿಆಹ್ವಾನ

ಬೆಳಗಾವಿ, ಡಿ.22 : 2020-21ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಕ್ರೀಡಾ ಅಂಕಣ ಗುರುತುಗಾರ (ಮಾರ್ಕರ್) ತರಬೇತಿ ಕಾರ್ಯಕ್ರಮವನ್ನು ಕೊಡಗು ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವ ಜನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
ಕಾರ್ಯಕ್ರಮವು ವಸತಿ ಸಹಿತವಾಗಿದ್ದು, ಹಾಜರಾಗುವ ಯುವಕ/ಯುವತಿಯರಿಗೆ ಪ್ರಮಾಣ ಪತ್ರ, ಕ್ರೀಡಾಗಂಟು, ಊಟೋಪಹಾರ, ವಸತಿ ವ್ಯವಸ್ಥೆ ಹಾಗೂ ಪ್ರಯಾಣ ಭತ್ಯೆಯನ್ನು ನೀಡಲಾಗುವುದು.
ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಡಿಸೆಂಬರ್ 28 ರ ಒಳಗಾಗಿ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಬೆಳಗಾವಿ ಇವರ ಕಛೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಬೆಳಗಾವಿ ಕಚೇರಿಯನ್ನು ಸಂಪರ್ಕಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. /////

 

ಕ್ರೀಡಾ ಶಾಲೆ / ಕ್ರೀಡಾ ನಿಲಯಗಳಿಗೆ ಆಯ್ಕೆ

ಬೆಳಗಾವಿ, ಡಿ.22 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಡೆಸಲಾಗುತ್ತಿರುವ ಕ್ರೀಡಾ ಶಾಲೆ/ಕ್ರೀಡಾ ನಿಲಯಗಳಿಗೆ 2021-22ನೇ ಸಾಲಿಗಾಗಿ ಆಯ್ಕೆಗಳನ್ನು ಬೆಳಗಾವಿ ಜಿಲ್ಲೆಯ ಹತ್ತೂ ತಾಲೂಕುಗಳಲ್ಲಿ ನಡೆಸಲಾಗುತ್ತಿದೆ.
ಡಿಸೆಂಬರ್ 28 ರಂದು ರಾಮದುರ್ಗ ತಾಲೂಕಿನ ಚಂದರಗಿ ಕ್ರೀಡಾ ಶಾಲೆ ಮತ್ತು ಗೋಕಾಕ, ಅಥಣಿ ತಾಲೂಕು ಕ್ರೀಡಾಂಗಣಗಳಲ್ಲಿ, ಡಿಸೆಂಬರ್ 29 ರಂದು ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಗ್ರಾಮದ ಹೆಚ್.ಡಿ.ಪಿ ಹೈಸ್ಕೂಲ್ ಮೈದಾನ ಮತ್ತು ಸವದತ್ತಿ, ರಾಯಬಾಗ ತಾಲೂಕು ಕ್ರೀಡಾಂಗಣಗಳಲ್ಲಿ ಡಿಸೆಂಬರ್ 31 ರಂದು ಖಾನಾಪೂರ, ಬೈಲಹೊಂಗಲ ಮತ್ತು ಚಿಕ್ಕೋಡಿ ತಾಲೂಕು ಕ್ರೀಡಾಂಗಣಗಳಲ್ಲಿ ತಾಲೂಕು ಮಟ್ಟದ ಆಯ್ಕೆ ಪ್ರಕ್ರಿಯೆಗಳನ್ನು ನಡೆಸಲಾಗುವುದು. ಜನವರಿ 01 ರಂದು ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆಗಳನ್ನು ನಡೆಸಲಾಗುವುದು.
ಅಥ್ಲೆಟಿಕ್ಸ್, ಹಾಕಿ, ಬಾಸ್ಕೇಟ್‍ಬಾಲ್, ವಾಲಿಬಾಲ್, ಫುಟ್‍ಬಾಲ್, ಜಿಮ್ನಾಸ್ಟಿಕ್, ಜುಡೋ, ಕುಸ್ತಿ ಮತ್ತು ಸೈಕ್ಲಿಂಗ್ ಕ್ರೀಡೆಗಳಲ್ಲಿ ಆಯ್ಕೆಗಳನ್ನು ನಡೆಸಲಾಗುವುದು. 4ನೇ ತರಗತಿ ಮುಗಿಸಿ 5ನೇ ತರಗತಿಗೆ ಅರ್ಹರಾಗುವ 11 ವರ್ಷದೊಳಗಿನ, 7ನೇ ತರಗತಿ ಮುಗಿಸಿ 8ನೇ ತರಗತಿಗೆ ಅರ್ಹರಾಗುವ 14 ವರ್ಷದೊಳಗಿನ ಹಾಗೂ 10ನೇ ತರಗತಿ ಮುಗಿಸಿ 1ನೇ ಪಿ.ಯು.ಸಿ ಗೆ ಅರ್ಹರಾಗುವ 18 ವರ್ಷದೊಗಳಿಗಿನ ಬಾಲಕ ಬಾಲಕಿಯರು ಈ ಆಯ್ಕೆಗಳಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.ರಾಜ್ಯ ಮಟ್ಟದಲ್ಲಿ ಆಯ್ಕೆಯಾದವರಿಗೆ ಊಟೋಪಹಾರ, ವಸತಿಯೊಂದಿಗೆ ಆಯಾ ಕ್ರೀಡೆಗಳಲ್ಲಿ ಉಚಿತ ತರಬೇತಿ ನೀಡಿರಾಷ್ಟ್ರ, ಅಂತರರಾಷ್ಟ್ರ ಮಟ್ಟದ ಕ್ರೀಡಾಪಟುಗಳನ್ನು ತಯಾರಿಸುವುದು ಈ ಯೋಜನೆಯ ಗುರಿಯಾಗಿದೆ. ಅರ್ಹ ಬಾಲಕ, ಬಾಲಕಿಯರು ಆಯಾ ದಿನಗಳಂದು ಸದರಿ ಮೇಲಿನ ಸ್ಥಳಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಮುಂಜಾನೆ 8.00 ಗಂಟೆಗೆ ಹಾಜರಿರುವುದು.
ತಾಲೂಕ ಮಟ್ಟದ ಆಯ್ಕೆಗಳಲ್ಲಿ ಭಾಗವಹಿಸಲು ಸಾಧ್ಯವಾಗದ ಕ್ರೀಡಾಪಟುಗಳು ಜನವರಿ 01 ರಂದು ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿರುವ ಆಯ್ಕೆ ಪ್ರಕ್ರಿಯೆಯಲ್ಲಿ ನೇರವಾಗಿ ಭಾಗವಹಿಸಬಹುದಾಗಿರುತ್ತದೆ.
ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಬೆಳಗಾವಿ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 0831-2474101 ಅನ್ನು ಸಂಪರ್ಕಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. /////