ರಾಜ್ಯದಾದ್ಯಂತ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ

0

ಬೆಂಗಳೂರು, ಡಿ. 23- ಹೊಸ ಬಗೆಯ ಕೊರೊನಾ ವೈರಸ್ ಹರಡುತ್ತಿರುವ ಕಾರಣದಿಂದ ರಾಜ್ಯದಲ್ಲಿ ಬುಧವಾರದಿಂದ ಜನವರಿ 2 ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಬುಧವಾರ ಕೋವಿಡ್ ನಿಯಂತ್ರಣ ಕಾರ್ಯಪಡೆ, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿ ಗಳೊಂದಿಗೆ ಮಾತನಾಡಿದ ಅವರು, ‘ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬುಧವಾರ ರಾತ್ರಿ ಯಿಂದಲೇ ಈ ಕ್ರಮ ಜಾರಿಗೆ ಬರಲಿದೆ. ಇಡೀ ರಾಜ್ಯಕ್ಕೆ ಈ ಆದೇಶ ಅನ್ವಯ ವಾಗಲಿದೆ’ ಎಂದರು.

ವಿದೇಶಗಳಿಂದ ರಾಜ್ಯಕ್ಕೆ ಬರುವವರು ಆರ್ ಟಿ-ಪಿಸಿಆರ್ ವಿಧಾನದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನೆಗೆಟಿವ್ ವರದಿ ಹೊಂದಿರಬೇಕು. ಹೊರಗೆ ಓಡಾಡುವಾಗ 72 ಗಂಟೆಗಳ ಅವಧಿಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದರು. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮತ್ತು ಹಿರಿಯ ಅಧಿಕಾರಿ ಗಳು ಸಭೆಯಲ್ಲಿದ್ದರು.