ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಅವಧಿ ದಿಢೀರ್ ಬದಲಾವಣೆ

0

ಬೆಂಗಳೂರು, ಡಿ. 23- ಹೊಸ ಬಗೆಯ ಕೊರೊನಾ ವೈರಸ್ ಹರಡುತ್ತಿರುವ ಕಾರಣದಿಂದ ರಾಜ್ಯದಲ್ಲಿ ಬುಧವಾರ (ಡಿ.23) ಜ. 2ರವರೆಗೆ ವಿಧಿಸ ಲಾಗಿದ್ದ ರಾತ್ರಿ ಕರ್ಫ್ಯೂವಿನಲ್ಲಿ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಕಚೇರಿ ಟ್ವೀಟ್‌ ಮಾಡಿದೆ.

ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ.

— CM of Karnataka (@CMofKarnataka) December 23, 2020

ರಾಜ್ಯದಲ್ಲಿ ಇಂದಿನಿಂದ (ಡಿ.23ರಿಂದ) ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂವನ್ನು ನಾಳೆಯಿಂದ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ ಜಾರಿಯಲ್ಲಿ ಇಡಲಾಗುತ್ತದೆ.

ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ, ಸಮಯದಲ್ಲಿಯೂ ಬದಲಾ ವಣೆ ಆಗಿದೆ. ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ ಮಾತ್ರ ಕರ್ಫ್ಯೂ ಜಾರಿಯಲ್ಲಿರಲಿದೆ.

ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯ ಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದು ಮುಖ್ಯಮಂತ್ರಿ ಕಚೇರಿ ಹೇಳಿದೆ.