ಕುವೆಂಪು ಜನ್ಮದಿನ: ವಿಶ್ವಮಾನವ ದಿನಾಚರಣೆ ಡಿ.29 ರಂದು

0

 

ಕುವೆಂಪು ಜನ್ಮದಿನ: ವಿಶ್ವಮಾನವ ದಿನಾಚರಣೆ ಡಿ.29 ರಂದು
ಬೆಳಗಾವಿ, ಡಿ.28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಮಂಗಳವಾರ (ಡಿ.29) ಬೆಳಿಗ್ಗೆ 11 ಗಂಟೆಗೆ ಬಸವರಾಜ ಕಟ್ಟೀಮನಿ ಸಭಾ ಭವನದಲ್ಲಿ ವಿಶ್ವಮಾನವ ದಿನಾಚರಣೆ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಇಲಾಖೆ ಸಚಿವರು ಲಕ್ಷ್ಮಣ ಸವದಿ ಘನ ಉಪಸ್ಥಿತರಿರುವರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಮತ್ತು ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಶ್ರೀಮಂತ ಪಾಟೀಲ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಶಾಸಕರು ಅನಿಲ ಎಸ್. ಬೆನಕೆ ಅಧ್ಯಕ್ಷತೆ ವಹಿಸಲಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ್ ಕವಟಗಿಮಠ, ಕರ್ನಾಟಕ ವಿಧಾನ ಸಭೆ ಉಪ ಸಭಾಧ್ಯಕ್ಷರಾದ ವಿಶ್ವನಾಥ ಚ. ಮಾಮನಿ, ನವದೆಹಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಾದ ಶಂಕರಗೌಡ ಐ. ಪಾಟೀಲ,

ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಆಶಾ ಐಹೊಳೆ, ಕರ್ನಾಟಕ ರಾಜ್ಯ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಶಾಸಕರಾದ ಪಿ. ರಾಜೀವ,

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ಶಾಸಕರಾದ ಮಹೇಶ ಕುಮಠಳ್ಳಿ ಉಪಸ್ಥಿತರಿರುವರು ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ. ಹೀರೆಮಠ ಅವರು ತಿಳಿಸಿದ್ದಾರೆ.