ಬೆಳಗಾವಿ ರೈಲ್ವೆ ನಿದ್ಲಾಣದ ಹತ್ತಿರ ನಿರ್ಮಾಣವಾಗುತ್ತಿರುವ ಬಸ ನಿಲ್ದಾಣ ಕಾಮಗಾರಿ: ಶಾಸಕ ಅನಿಲ ಬೆನಕೆ ಬೇಟಿ

0

ಬೆಳಗಾವಿ 29 : ಬಸ ನಿಲ್ದಾಣ ಕಾಮಗಾರಿಯ ಪ್ರಗತಿಯನ್ನು ಮಂಗಳವಾರದಂದು ಶಾಸಕ ಅನಿಲ ಬೆನಕೆರವರು ಬೆಳಗಾವಿ ನಗರದ ರೈಲ್ವೆ ನಿಲ್ದಾಣದ ಹತ್ತಿರ ಸ್ಮಾರ್ಟ ಸಿಟಿ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬಸ ನಿಲ್ದಾಣಕ್ಕೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಬೇಟಿ ನೀಡಿ ಬಸ ನಿಲ್ದಾಣ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದ ಅವರು ಬಸ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಆಗುತ್ತಿರುವ ಸಮಸ್ಯೆಗಳನ್ನು ಆಲಿಸಿದರು.


ಈ ಸಂದರ್ಭದಲ್ಲಿ ಮುಖ್ಯವಾಗಿ ಪ್ರಯಾಣಿಕರಿಗೆ ಆಗುತ್ತಿರುವ ಶೌಚಾಲಯದ ಸಮಸ್ಯೆಯನ್ನು ಆಲಿಸಿದ ಅವರು ನಿಲ್ದಾಣದಲ್ಲಿರುವ ಶೌಚಾಲಯಗಳಿಗೆ ತೆರಳಲು ಸ್ಥಳಾವಕಾಶವನ್ನು ಕಲ್ಪಿಸಿ ಸೂಕ್ತ ಮಾರ್ಗಸೂಚಿ ಫಲಕಗಳನ್ನು ಅಳವಡಿಸಿ ಜನರ ಹಿತದೃಷ್ಠಿಯಿಂದ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ಸಮಸ್ಯೆಯನ್ನು ಬಗೆಹರಿಸಿದರು.

ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ, ಸ್ಮಾರ್ಟ ಸಿಟಿ ಅಧಿಕಾರಿಗಳು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಯಾಣಿಕರು ಉಪಸ್ಥಿತರಿದ್ದರು