ಕೋವಿಡ್ -19 ಹಿನ್ನೆಲೆಯಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಜಯಂತಿ ಸರಳ ಆಚರಣೆ: ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ

0

ಬೆಳಗಾವಿ, ಡಿ.29: ಕೋವಿಡ್-19 ಹಿನ್ನಲೆಯಲಿ ಸರಕಾರದ ಮಾರ್ಗಸೂಚಿಯಂತೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಜಯಂತಿಯನ್ನು ಜ.1 ರಂದು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಯಾದ ಅಶೋಕ ದುಡಗುಂಟಿ ಅವರು ತಿಳಿಸಿದರು
ಜಯಂತಿ ಆಚರಣೆಯ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಡಿ.29) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜ.1 ರಂದು ಬೆಳಿಗ್ಗೆ 11 ಗಂಟೆಗೆ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಶಿಲ್ಪಿಗಳಿಗೆ ಸನ್ಮಾನ ಹಾಗೂ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಮಾಸ್ಕ್, ಸ್ಯಾನಿಟೈಸರ್ ಬಳಕೆಯ ಜೊತೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರಳ ರೀತಿಯಲ್ಲಿ ಜಯಂತಿಯನ್ನು ಆಚರಣೆ ಮಾಡಲಾಗುವುದು ಎಂದು ದುಡಗುಂಟಿ ತಿಳಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ವಿದ್ಯಾವತಿ ಭಜಂತ್ರಿ, ಸಮಾಜದ ಮುಖಂಡರಾದ ಎನ್.ಎಸ್ ಶಂಕರಾಚಾರ್ಯ, ಬಿ.ಆರ್ ಬಡಿಗೇರ, ಉಮೇಶ ಪತ್ತಾರ ಮತ್ತಿತರು ಸಭೆಯಲ್ಲಿ ಉಪಸ್ಥಿತರಿದ್ದರು.