ಮತ ಎಣಿಕೆ ಕಾರ್ಯ ಇಲ್ಲಿನ ಆರ್.ಡಿ.ಕಾಲೇಜಿನಲ್ಲಿ ಬುಧುವಾರ ನಡೆಯಲಿದ್ದು, ಅದಕ್ಕೆ ಬೇಕಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.

0

ಚಿಕ್ಕೋಡಿ: ತಾಲೂಕಿನ 35 ಗ್ರಾಮ ಪಂಚಾಯತಿ ಚುನಾವಣೆಯ ಮತ ಎಣಿಕೆ ಕಾರ್ಯ ಇಲ್ಲಿನ ಆರ್.ಡಿ.ಕಾಲೇಜಿನಲ್ಲಿ ಬುಧುವಾರ ನಡೆಯಲಿದ್ದು, ಅದಕ್ಕೆ ಬೇಕಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.

ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಒಟ್ಟು 14 ಕೊಠಡಿಗಳಲ್ಲಿ 81 ಟೇಬಲ್‍ಗಳನ್ನು ಮಾಡಲಾಗಿದೆ. ಮೂರು ಸುತ್ತಿನಲ್ಲಿ ಮತ ಎಣಿಕೆ ನಡೆಯಲಿದೆ. 89 ಜನ ಮತ ಎಣಿಕೆ ಮೇಲ್ವಿಚಾರಕರು ಮತ್ತು 178 ಜನ ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗಿದೆ. 224 ಕ್ಷೇತ್ರಗಳಲ್ಲಿ 625 ಜನ ಸದಸ್ಯರನ್ನು ಆಯ್ಕೆ ಮಾಡಬೇಕಾಗಿದೆ ಎಂದು ತಹಸೀಲ್ದಾರ ಎಸ್.ಎಸ್.ಸಂಪಗಾಂವಿ ತಿಳಿಸಿದರು.

ಬಿಗಿ ಪೊಲೀಸ್ ಬಂದೋಬಸ್ತ್ ! ಮತ ಎಣಿಕೆ ಕೇಂದ್ರದ ಸುತ್ತಲೂ ಬಿಗಿ ಪೊಲೀಸ್ ಸ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಒಬ್ಬರು ಸಿಪಿಐ, 6 ಜನ ಪಿಎಸ್‍ಐಗಳು ಸೇರಿದಂತೆ ಒಟ್ಟು 100 ಜನ ಪೊಲೀಸ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಡಿಎಸ್ಪಿ ಮನೋಜಕುಮಾರ್ ತಿಳಿಸಿದರು.