ಗ್ರಾಮೀಣ ಅಂಚೆ ನೌಕರರ ಹುದ್ದೆಗೆ ಅರ್ಜಿ ಆಹ್ವಾನ

0

ಬೆಳಗಾವಿ, ಜ.01 : ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಕರ್ನಾಟಕದಲ್ಲಿರುವ 2,443 ಗ್ರಾಮೀಣ ಅಂಚೆ ನೌಕರರ ಹುದ್ದೆಗಳನ್ನು ತುಂಬಲು ಆನ್‍ಲೈನ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಮತ್ತು ವಯೋಮಿತಿ ಕನಿಷ್ಟ 18 ರಿಂದ ಗರಿಷ್ಟ 40 ವರ್ಷಗಳಾಗಿದ್ದುಅನುಸೂಚಿತ ಜಾತಿ/ಬುಡಕಟ್ಟು/ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅಭ್ಯರ್ಥಿಗಳು ತಮ್ಮ ಹೆಸರನ್ನು      http://appost.in/gdsonline ರಲ್ಲಿ ಅಂತರ್ಜಾಲದ ಮೂಲಕ ನೋಂದಾಯಿಸಬಹುದು.
ಹಿಂದುಳಿದ ವರ್ಗಗಳ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.100/- ಅರ್ಜಿ ಶುಲ್ಕವನ್ನು ರಾಜ್ಯದ ಯಾವುದೇ ಮುಖ್ಯ ಅಂಚೆ ಕಛೇರಿಯಲ್ಲಿ ಅಥವಾ ಆಯ್ದ ಅಂಚೆ ಕಛೇರಿಗಳ ಕೌಂಟರ್‍ನಲ್ಲಿ ಸಲ್ಲಿಸಬೇಕಾಗುತ್ತದೆ. http://appost.in/gdsonline ಈ ವೆಬ್‍ಸೈಟ್‍ನ ಹೋಮ್ ಪೇಜ್‍ನಲ್ಲಿ ಲಭ್ಯವಿರುವ ಯುಆರ್‍ಎಲ್‍ನ ಮೂಲಕ ಶುಲ್ಕವನ್ನು ಕಟ್ಟಬಹುದಾಗಿದೆ. ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ, ತೃತೀಯ ಲಿಂಗಿಗಳಿಗೆ ಮತ್ತು ಅನುಸೂಚಿತ

ಜಾತಿ/ಬುಡಕಟ್ಟು ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಎಲ್ಲಾ ಅಭ್ಯರ್ಥಿಗಳು/ಅರ್ಜಿದಾರರು ಆನ್‍ಲೈನ್‍ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಜನವರಿ 20 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಪೋಸ್ಟ್ ಮಾಸ್ಟರ್ ಜನರಲ್ ಬೆಂಗಳೂರು ಮುಖ್ಯ ಕಾರ್ಯಾಲಯ (080-22392599), ಪೋಸ್ಟ್ ಮಾಸ್ಟರ್ ಜನರಲ್ ದಕ್ಷಿಣ ವಲಯ (9481455606), ಪೋಸ್ಟ್ ಮಾಸ್ಟರ್ ಜನರಲ್ ಉತ್ತರ ಕರ್ನಾಟಕ ವಲಯ(08362740454), ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕರ್ನಾಟಕ ವೃತ್ತ (080-22392544), ವೆಬ್‍ಸೈಟ್:  http://appost.in/gdsonline ಅನ್ನು ಸಂಪರ್ಕಿಸಿ ಎಂದು ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕರ್ನಾಟಕ ಅಂಚೆ ವೃತ್ತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.