ಕೇಂದ್ರ ಸಚಿವ ಸದಾನಂದಗೌಡ ಆಸ್ಪತ್ರೆಗೆ ದಾಖಲು

0

ಚಿತ್ರದುರ್ಗ, ಜ. 3- ಕೇಂದ್ರ ಸಚಿವ ಸದಾನಂದಗೌಡ ಶುಗರ್ ಶುಗರ್ ಲೋ ಹಿನ್ನೆಲೆಯಲ್ಲಿ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ಇಂದು ಮಧ್ಯಾಹ್ನ

ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭಾನುವಾರ ದಾಖಲಾಗಿದ್ದಾರೆ.

ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದು, ಇದೀಗ ಝೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಒಯ್ಯಲು ನಿರ್ಧರಿಸ ಲಾಗಿದೆ ತಿಳಿದು ಬಂದಿದೆ.

ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಹಿಂದಿರುಗುವಾಗ ಆರೋಗ್ಯ ಏರುಪೇರಾಗಿದೆ. ಚಿತ್ರದುರ್ಗ ದ ಹೋಟೆಲ್ ನವೀನ್ ರೇಜೆನ್ಸಿಗೆ ಮಧ್ಯಾಹ್ನ ಊಟಕ್ಕೆ ಬಂದಿದ್ದ ಅವರು, ಕಾರಿನಿಂದ ಇಳಿಯುವಾಗ ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸವೇಶ್ವರ ಆಸ್ಪತ್ರೆಗೆ ಬಿಜೆಪಿ ಶಾಸಕರು ಹಾಗೂ ಮುಖಂಡರು ದೌಡಾಯಿಸಿದ್ದಾರೆ.