ಬಸ್ ಮಗುಚಿ ಬಿದ್ದು 6 ಜನರು ಸಾವು

0

ಪುತ್ತೂರು, ಜ. – 3 ಪುತ್ತೂರು ಕಡೆಯಿಂದ ಸುಳ್ಯ ಆಲೆಟ್ಟಿ ಮೂಲಕ ಪಾಣತ್ತೂರು ಕರಿಕೆ ಕಡೆಗೆ ಹೋಗುತ್ತಿದ್ದ ಮದುವೆ ದಿಬ್ಬಣದ ಖಾಸಗಿ ಬಸ್ ಪಾಣತ್ತೂರು ಬಳಿ ಪಲ್ಟಿಯಾಗಿದ್ದು, ಆರು ಜನರು ಮೃತಪಟ್ಟಿದ್ದಾರೆ.

ಪಾಣತ್ತೂರು ಬಳಿಯ ಕೊಡಗು ಜಿಲ್ಲಾ ವ್ಯಾಪ್ತಿಯ ಚೆತ್ತುಕಯ ಎಂಬಲ್ಲಿ ವರನ ಮನೆಯಲ್ಲಿ ಇದ್ದ ಮದುವೆ ಕಾರ್ಯಕ್ರಮಕ್ಕೆ ವಧುವಿನ ಊರಾದ ಕಾಸರಗೋಡು ಜಿಲ್ಲೆಯ ಈಶ್ವರ

ಮಂಗಲದಿಂದ ವಧುವಿನ ದಿಬ್ಬಣ ಹೋಗುತ್ತಿತ್ತು. ವಧು ಮತ್ತು ಇತರರು ಟಿಟಿ ವಾಹನದಲ್ಲಿ ಹೋಗುತ್ತಿದ್ದರು. ಹಿಂದಿನಿಂದ ಖಾಸಗಿ ಬಸ್‌ನಲ್ಲಿ ಸುವಾರು 40ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು.

ಕಲ್ಲಪ್ಪಳ್ಳಿ – ಪಾಣತ್ತೂರು ಮಧ್ಯೆ ಕೇರಳದ ಕಾಸರಗೋಡು ಜಿಲ್ಲೆಗೆ ಸೇರಿದ ಪೆರಿಯಾರಂ ಎಂಬಲ್ಲಿ ಇಳಿಜಾರಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದರ ಮೇಲೆ ಉರುಳಿ ಬಿದ್ದು ದುರಂತ ಸಂಭವಿಸಿದೆ.

ಸುಮಾರು 30ರಷ್ಟು ಮಂದಿಗೆ ಗಾಯಗೊಂಡಿದ್ದು , ಬಾಲಕ ಸಹಿತ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ.

ಗಾಯಾಳುಗಳನ್ನು ಪಾಣತ್ತೂರು, ಪೂಡಂಕಲ್ಲು, ಕಾಂಞಂಗಾಡ್, ಕಣ್ಣೂರು, ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.