ಪ್ರಾಧಿಕಾರದ ಪುಸ್ತಕ: ಶೇ.50%ರ ರಿಯಾಯಿತಿಯಲ್ಲಿ ಮಾರಾಟ

0

ಬೆಳಗಾವಿ, ಡಿ.04 p: ಗಣರಾಜ್ಯೋತ್ಸವದ ಅಂಗವಾಗಿ 2021ರ ಜನವರಿ ತಿಂಗಳು ಪೂರ್ತಿ ಕನ್ನಡ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50%ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲ ಸಿರಿಗನ್ನಡ ಪುಸ್ತಕ ಮಳಿಗೆಗಳಲ್ಲಿ ದೊರೆಯುತ್ತವೆ ಎಂದು ಕನ್ನಡ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲಗಳಲ್ಲಿಯೂ ವೆಬ್‍ಸೈಟ್ www.kannadapustakapradhikara.com ಮೂಲಕ ಪುಸ್ತಕಗಳನ್ನು ಆಯ್ಕೆ ಮಾಡಿ ಆನ್‍ಲೈನ್ ಮೂಲಕ ಹಣ ಪಾವತಿಸಿ ಶೇ.50%ರ ರಿಯಾಯಿತಿಯಲ್ಲಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ.