ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಜ.7 ಹಾಗೂ ಜ.8 ರಂದು ಜಿಲ್ಲಾ ಪ್ರವಾಸ

0

 

ಬೆಳಗಾವಿ, ಜ.5 : ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಬಿ. ಎ. ಬಸವರಾಜ ಅವರು ಗುರುವಾರ(ಜ.7) ಮತ್ತು ಶುಕ್ರವಾರ(ಜ.8) ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ (ಜ.7) ಮಧ್ಯಾಹ್ನ 4.30 ಗಂಟೆಗೆ ಬೆಳಗಾವಿ ಪ್ರವಾಸಿ ಮಂದಿರಕ್ಕೆ ಆಗಮಿಸಲಿದ್ದು, ಸಂಜೆ 5.30 ರ ವರೆಗೆ ಜಿಲ್ಲಾ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.
ಸಂಜೆ 5.30 ರಿಂದ 6.30 ರ ವರೆಗೆ ಜಿಲ್ಲಾ ಬಿ.ಜೆ.ಪಿ ಕಚೇರಿಗೆ ಭೇಟಿ ನೀಡಲಿದ್ದು, ನಂತರ ನಗರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಶುಕ್ರವಾರ (ಜ.8) ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ, ನಗರ ನೀರು ಸರಬರಾಜು, ಒಳಚರಂಡಿ ಮಂಡಳಿ ಮತ್ತು ಕೆ.ಯು.ಐ.ಡಿ.ಎಫ್.ಸಿ ವ್ಯಾಪ್ತಿಯಲ್ಲಿನ ಅಭಿವೃದ್ದಿ ಕಾಮಗಾರಿಗಳ ವೀಕ್ಷಣೆ ಮಾಡಲಿದ್ದಾರೆ.
ಬೆಳಿಗ್ಗೆ 10.30 ರಿಂದ 12 ಗಂಟೆಯವರೆಗೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಶೀಲನಾ ಸಭೆ ನಡೆಸಿ, ಮಧ್ಯಾಹ್ನ 12 ರಿಂದ 12.45 ಗಂಟೆಯವರೆಗೆ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಮಧ್ಯಾಹ್ನ 12.45 ರಿಂದ 1.30 ರ ವರೆಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 2.30 ರಿಂದ ಸ್ಮಾರ್ಟ್ ಸಿಟಿ, ಬೆಳಗಾವಿ ಹಾಗೂ ಕಲಬುರಗಿ ವಿಭಾಗದ ವ್ಯಾಪ್ತಿಯಲ್ಲಿ ಕರ್ನಾಟಕ ನಗರ ಮೂಲಸೌಕರ್ಯ ಮತ್ತು ಹಣಕಾಸು ನಿಗಮದ ವತಿಯಿಂದ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಕೂಡ ಪಾಲಿಕೆಯ ಸಭಾಂಗಣದಲ್ಲಿ ನಡೆಸುವರು.
ಸಭೆಯ ಬಳಿಕ ರಾತ್ರಿ 7.25 ಬೆಳಗಾವಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಹೊರಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.