ಕೋವಿಡ್-19 ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿ ಸುವ ಮೂಲಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶಾಕ್

0

ಬೆಂಗಳೂರು, ಜ. 6- ಕೋವಿಡ್-19 ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿ ಸುವ ಮೂಲಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.

ಸದರಿ ಆದೇಶದ ಪ್ರಕಾರ 2021ನೇ ಸಾಲಿನ ಕ್ಯಾಲೆಂಡರ್ ವರ್ಷ ದಿನಾಂಕ 01-01-2021 ರಿಂದ 31-12-2021 ರವರೆಗಿನ ಅವಧಿಯಲ್ಲಿ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸಲಾಗಿದೆ. ಆದರೆ, 2021 ರ ಜನವರಿ ತಿಂಗಳಿಂದ ಡಿಸೆಂಬರ್ ಅಂತ್ಯದ ಅವಧಿಯಲ್ಲಿ ನಿವೃತ್ತಿ ಹೊಂದುವ ಎಲ್ಲಾ ಅರ್ಹ ನೌಕರರು / ಅಧಿಕಾರಿಗಳು, ಅವರು ನಿವೃತ್ತಿ ಹೊಂದುವ ತಿಂಗಳಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರಾಗಿ ರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸರ್ಕಾರದ ಈ ಆದೇಶವು ಸರ್ಕಾರದಿಂದ ಸಹಾಯಾನುದಾನ / ಅನುದಾನ ಪಡೆಯುವ ಅಥವಾ ಪಡೆಯದಿರುವ ಎಲ್ಲಾ ಕರ್ನಾಟಕ ಸರ್ಕಾರದ ಎಲ್ಲಾ ಉದ್ಯಮಗಳ ಸಂಸ್ಥೆಗಳ ನೌಕರರಿಗೂ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.