ರುಕ್ಮೀನಿ ನಗರದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಅನಿಲ ಬೆನಕೆ :

0

ಬೆಳಗಾವಿ 06 : ಶಾಸಕ ಅನಿಲ ಬೆನಕೆರವರು ಬೆಳಗಾವಿ ನಗರದ ರುಕ್ಮೀನಿ ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ರೂ. 20 ಲಕ್ಷಗಳ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ಸಲ್ಲಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅನಿಲ ಬೆನಕೆರವರು ರುಕ್ಮೀನಿ ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 20 ಲಕ್ಷಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲು ಭೂಮಿ ಪೂಜೆಯನ್ನು ಸಲ್ಲಿಸಲಾಗಿದೆ ಎಂದ ಅವರು ಕಾಮಗಾರಿಯನ್ನು ಸಾರ್ವಜನಿಕರ ಸಹಕಾರವನ್ನು ತೆಗೆದೊಕೊಂಡು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ, ಲೋಕೋಪಯೋಗಿ ಇಲಾಖೆ ಇಂಜಿನೀಯರ ನಾಯಕ, ಗುತ್ತಿಗೆದಾರರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.