ಎಸ್ಸೆಸ್ಸೆಲ್ಸಿ ಪರೀಕ್ಷೆ ಜೂನ್ ಮೊದಲ ವಾರ ಹಾಗೂ ದ್ವಿತೀಯ ಪಿಯು ಪರೀಕ್ಷೆ ಮೇ ಎರಡನೇ ವಾರ ನಡೆಯ ಲಿದೆ

0

ಬೆಂಗಳೂರು, ಜ. 6- ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಜೂನ್ ಮೊದಲ ವಾರ ಹಾಗೂ ದ್ವಿತೀಯ ಪಿಯು ಪರೀಕ್ಷೆ ಮೇ ಎರಡನೇ ವಾರ ನಡೆಯ ಲಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಶಿಕ್ಷಣ ಇಲಾಖೆ ಅಂತಿಮಗೊಳಿಸಿದೆ. ಈ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುವುದು. ಯಾವುದೇ ವಿದ್ಯಾರ್ಥಿ ಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

ಒಂದರಿಂದ ಒಂಬತ್ತಕ್ಕೆ ಪಠ್ಯ ಕಡಿತವಿಲ್ಲ: ಒಂದರಿಂದ ಒಂಬತ್ತನ ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ‌ಕಡಿತ ಪ್ರಸ್ತಾಪ ಇಲಾಖೆಯ ಮುಂದೆ ಇಲ್ಲ. ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿ ಅಂತಿಮಗೊಳಿಸಲಾಗಿದೆ. ಶಾಲಾ ಹಂತದಲ್ಲಿ ಮೌಲ್ಯ ಮೌಲ್ಯಮಾಪನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿ ಇರಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.