ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ದೂರು ದಾಖಲು!!

0

ಬೆಂಗಳೂರು:  ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ದ ಮಡಿಕೇರಿ ಗ್ರಾಮಾಂತರ ಪೊಲೀಸ್ ಯಲ್ಲಿ ಎಫ್ ಐಆರ್  ದಾಖಲಾಗಿದೆ.

ಕೊಡವರು ಗೋ ಮಾಂಸ ತಿನ್ನುತ್ತಾರೆ ಎಂಬುದಾಗಿ ಇತ್ತೀಚಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದರಿಂದಾಗಿ ಕೊಡವರ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಸಿದ್ದರಾಮಯ್ಯ   ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ  ಪಶ್ಟಿಮ ಘಟ್ಟ ಸಂರಕ್ಷಣಾ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ ಎಂಬುವರು ದೂರು ನೀಡಿದ್ದಾರೆ.

 

ಈ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಪಶ್ಚಿಮ ಘಟ್ಟ ಸಂರಕ್ಷಣಾ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ಸಿದ್ದರಾಮಯ್ಯ ಹೇಳಿಕೆಯಿಂದ ಕೊಡವರ ಭಾವನೆಗೆ ಧಕ್ಕೆಯಾಗಿದೆ. ಸಿದ್ದರಾಮಯ್ಯ ಅವರು ಬಹಿರಂಗ ಕ್ಷಮೆ ಕೇಳಿದ್ರೂ ನಾವು ಕ್ಷಮಿಸೋದಿಲ್ಲ. ಕಾನೂನು ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.