ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ನೆರವು ನೀಡುವ ಮೂಲಕ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಮಾನವೀಯತೆ

0

ಬೆಳಗಾವಿ:  ಹಿರೇಬಾಗೇವಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಇಂದು ಬೆಳಗ್ಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ನೆರವು ನೀಡುವ ಮೂಲಕ  ಮಾಜಿ ಸಂಸದ  ಪ್ರಕಾಶ ಹುಕ್ಕೇರಿ ಮಾನವೀಯತೆ ಮೆರೆದಿದ್ದಾರೆ.

 

ಇಂದು ಬೆಳಿಗ್ಗೆ 10 ಗಂಟೆಗೆ ಅಪಘಾತ ಸಂಭವಿಸಿತ್ತು. ಆ ಸಮಯದಲ್ಲಿ ಮಾಜಿ ಸಂಸದ  ಪ್ರಕಾಶ್ ಹುಕ್ಕೇರಿ ಯವರು ಬೆಳಗಾವಿಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು.  ಅಪಘಾತ ಆಗಿದ್ದನ್ನು ಕಂಡು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಮಾಹಿತಿ ನೀಡಿ ಆಂಬ್ಯುಲೆನ್ಸ್ ಬರುವಂತೆ ಸೂಚಿಸಿದ್ರು.

 

ಅಂಬ್ಯುಲೆನ್ಸ್ ಬಂದು ಗಾಯಾಳುವನ್ನು ಕರೆದುಕೊಂಡು ಹೋಗುವವರೆಗೂ ಸ್ಥಳದಲ್ಲಿ ಇದ್ದು, ಗಾಯಾಳು ವ್ಯಕ್ತಿಗೆ 10 ಸಾವಿರ ರೂಪಾಯಿ ಪರಿಹಾರ ನೀಡಿದರು.

 

ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರ ಕಾರ್ಯಕರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ರು.