ಡಿವೈಎಸ್‍ಪಿ ಆರ್.ಎಸ್. ಉಜ್ಜನಕೊಪ್ಪರಿಗೆ ರಾಷ್ಟ್ರಪತಿಗಳ ಪೊಲೀಸ್ ಶ್ಲಾಘನೀಯ ಸೇವಾ ಪದಕ

0

ಬೆಂಗಳೂರು ಜ.,10- ಇತ್ತಿಚೆಗೆ ಬೆಂಗಳೂರಿನ ರಾಜ್ ಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲರಾದ ವಾಜುಬಾಯಿ ವಾಲಾ ಅವರಿಂದ ರಾಜ್ಯದಲ್ಲಿ ಪೊಲೀಸ ಇಲಾಖೆಯಲ್ಲಿ ಸಲ್ಲಿಸಿದ ಉತ್ತಮ ಸೇವೆಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕವನ್ನು ಡಿವೈಎಸ್‍ಪಿ ಆರ್.ಎಸ್. ಉಜ್ಜನಕೊಪ್ಪ ಸ್ವೀಕರಿಸಿದರು.


2018-19ನೇ ಸಾಲಿನ ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ರಾಜ್ಯದ 84ಜನ ಪೊಲೀಸ ಅಧಿಕಾರಿಗಳು ಆಯ್ಕೆಯಾಗಿದ್ದಾರೆ. ಇವರಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ವಿಭಾಗದ ಡಿವೈಎಸ್‍ಪಿ ಆರ್.ಎಸ್. ಉಜ್ಜನಕೊಪ್ಪರು ರಾಷ್ಟ್ರಪತಿಗಳ ಪೊಲೀಸ್ ಶ್ಲಾಘನೀಯ ಪದಕಕ್ಕೆ ಭಾಜನರಾಗಿದ್ದರು

ಇವರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಶಿಲ್ಥೀಬಾಂವಿ ಗ್ರಾಮದವರಾಗಿದ್ದು ರೈತ ಕುಟುಂಬದಿಂದ ಬಂದವರಾಗಿದ್ದಾರೆ. ಇವರು ತಮ್ಮ ವೃತ್ತಿಯ ಜೊತೆ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಇವರು ಉತ್ತಮ ಸಂಗೀತಗಾರರೂ ಆಗಿದ್ದಾರೆ.
ಇವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಸಿಕ್ಕಿರುವುದು ನಮ್ಮ ಬೆಳಗಾವಿ ಜಿಲ್ಲೆಗೆ ಹಾಗೂ ಪೊಲೀಸ್ ಇಲಾಖೆ ಹೆಮ್ಮೆ ಪಡುವಂತಾಗಿದೆ.

ಇವರು ಪೊಲೀಸ್ ಇಲಾಖೆಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿರುವ ಕಾರಣ ಇವರ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕವಾದ ಪೊಲೀಸ್ ಶ್ಲಾಘನೀಯ ಸೇವಾ ಪದಕ ನೀಡಿ ಗೌರವಿಸಲಾಗಿದೆ. ಪದಕ ಸಿಕ್ಕಿರುವದಕ್ಕೆ ಪೊಲೀಸ್ ಅಧಿಕಾರಗಳು, ಸಿಬ್ಬಂದಿಗಳು, ಅವರ ಹಿತೈಸಿಗಳು, ಹಾಗೂ ರಾಜ್ಯದ ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ಸೂಚಿಸಿ ಅಭಿನಂದಿಸಿದ್ದಾರೆ.

ಈ ಪ್ರಶಸ್ತಿ ಪುರಸ್ಕಾರ ವಿತರಣಾ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಗ್ರಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.