ಕೇಂದ್ರ ಗೃಹ ಸಚಿವ ಅಮಿತ ಷಾ ಜ 17 ಕ್ಕೆ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿ ದಂಡು ವ್ಯವಸ್ಥೆ ಕುರಿತು ಪರಿಶೀಲಿಸಿದರು

0

ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ ಷಾ ಜ 17 ಕ್ಕೆ ಆಗಮಿಸಲಿರುವ ಸಮಾಜ ಸೇವಕ ಸಮಾವೇಶದ ಸಮಾರೊಪ ಕಾರ್ಯಕ್ರಮದ
ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಮಂತ್ರಿ ರಮೇಶ ಜಾರಕಿಹೊಳಿ ನೇತೃತ್ವದ ಜಿಲ್ಲಾ ಟೀಂ.
ನಗರದ ಕೆ ಎಲ್ ಈ ಸಮೀಪದ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿ ದಂಡು ಕಾರ್ಯಕ್ರಮದ ಮುಖ್ಯ ಸಭಾಂಗಣ, ಕಾರ್ಯಕರ್ತರಿಗೆ ಕುಳಿತುಕೊಳ್ಳಲು ಸ್ಥಳಾವಕಾಶ ಭೋಜನದ ವ್ಯವಸ್ಥೆ ವಾಹನ ಪಾರ್ಕಿಂಗ್ ಸ್ಥಳಗಳನ್ಬು ಗುರ್ತಿಸಲಾಯಿತು. ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಮಾತನಾಡಿ, ದೇಶದ ಗೃಹ ಮಂತ್ರಿಗಳು ಬೆಳಗಾವಿ ಜಿಲ್ಲೆಯ ಬಗ್ಗೆ ಇರುವ ವಿಶೇಷ ಕಾಳಜಿಯಿಂದ ಆಗಮಿಸಲಿದ್ದು, ಜಿಲ್ಲೆಯ ಎಲ್ಲ ಮಂತ್ರಿಗಳು, ಶಾಸಕರು ಸಂಸದರು ಮಾಜಿ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕ್ರಮಕ್ಕೆ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಆಗಮಿಸಲಿದ್ದು ಅವರ ಸಂಪೂರ್ಣ ವ್ಯವಸ್ಥೆಯಲ್ಲಿ ಯಾವುದೆ ಅಸ್ತವ್ಯಸ್ತವಾಗದಂತೆ ಹಾಗೂ ಕೊವಿಡ್ ಮುನ್ನೆಚ್ಚರಿಕೆಯ ಕ್ರಮಗಳನ್ನು ತಗೆದುಕೊಂಡು ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರು ಸಹಕರಿಸಿಬೆಕೆಂದರು. ಭೋಜನದ ವ್ಯವಸ್ಥೆಗೆ ಪಿಯೊನಿಕ್ಸ್ ಶಾಲಾ ಆವರಣ ಮತ್ತು ಕೆಈಬಿ ಮೈದಾನ ಗುರ್ತಿಸಲಾಗಿದೆ. ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ಚಿಕ್ಕೊಡಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೆರ್ಲಿ, ಮಹಾನಗರ ಅಧ್ಯಕ್ಷ ಶಶಿಕಾಂತ ನಾಯಕ, ಶಾಸಕ ಅನೀಲ ಬೆನಕೆ, ಮಾಜಿ ಶಾಸಕರಾದ ಶಶಿಕಾಂತ ನಾಯಕ, ಡಾ.ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್, ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವಣಾಚೆ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಮೊಹಿತೆ, ಸುಭಾಷ್ ಪಾಟೀಲ, ಮುರಘೇಂದ್ರಗೌಡ ಪಾಟೀಲ, ದಾದಗೌಡ ಬಿರಾದಾರ, ಸತೀಶ ಅಪ್ಪಾಜಿಗೌಡ ಖಜಾಂಚಿ ಮಲ್ಲಿಕಾರ್ಜುನ ಮಾದಮ್ಮನವರ, ಮಾಧ್ಯಮ ಪ್ರಮುಖ ಎಫ್.ಎಸ್.ಸಿದ್ದನಗೌಡರ, ಹಣಮಂತ ಕೊಂಗಾಲಿ, ಅಭಯ ಅವಲಕ್ಕಿ, ಉಪಾಧ್ಯಕ್ಷ ಯುವರಾಜ ಜಾಧವ, ಜಿಲ್ಲಾ ಯುವಮೊರ್ಚಾ ಅಧ್ಯಕ್ಷ ಬಸವರಾಜ ನೇಸರಗಿ, ಗುರು ಮೆಟಗುಡ್ ಹಾಗೂ ಇತರರು ಇದ್ದರು.