ಶೀಘ್ರದಲ್ಲೇ ಶುಭ ಸುದ್ದಿ : ಬಿಎಸ್ ವೈ

0

ಹೊಸದಿಲ್ಲಿ, ಜ. 10- ಮಂತ್ರಿ ಮಂಡಲ ವಿಸ್ತರಣೆ ಕುರಿತಂತೆ ಕೇಂದ್ರದ ವರಿಷ್ಠರ ಜೊತೆಗೆ ಇಂದು ನಡೆದ ಸಭೆಯಲ್ಲಿ ಚರ್ಚೆ ನಡೆದಿದ್ದು, ಶೀಘ್ರ ದಲ್ಲೇ ಶುಭ ಸುದ್ದಿ ಸಿಗಲಿದೆ. ಕೇಂದ್ರ ನಾಯಕರ ಜೊತೆಗಿನ ಸಭೆ, ತಮಗೆ ತೃಪ್ತಿ , ಸಮಾಧಾನ ತಂದಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ, ಮಂತ್ರಿ ಮಂಡಲ ವಿಸ್ತರಣೆ ಬಗ್ಗೆ ವಿಸ್ತೃತವಾದ ಚರ್ಚೆ ನಡೆದಿದೆ. ಕೇಂದ್ರ ನಾಯಕರಿಗೆ ಎಲ್ಲಾ ರೀತಿಯ ಮಾಹಿತಿಯನ್ನು ನೀಡಿದ್ದೇವೆ. ಆದಷ್ಟು ಶೀಘ್ರದಲ್ಲಿಯೇ ಶುಭ ಸುದ್ದಿ ಸಿಗುವ ವಿಶ್ವಾಸವಿದೆ ಎಂದರು.

ಆದಾಗ್ಯೂ, ಮಂತ್ರಿ ಮಂಡಲ ವಿಸ್ತರಣೆಯೇ ಅಥವಾ ಪುನಾರಚನೆಯೋ ಎಂಬುದರ ಬಗ್ಗೆ ಗೊಂದಲಕಾರಿ ಹೇಳಿಕೆಗಳನ್ನು ನೀಡಿದ ಮುಖ್ಯಮಂತ್ರಿ, ಈ ವಿಚಾರದಲ್ಲಿ ಕೇಂದ್ರ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದಷ್ಟೇ ಪ್ರತಿಕ್ರಿಯಿಸಿದರು.

 

ಕೇಂದ್ರ ಗೃಹ ಸಚಿವ ಅಮಿತ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಉಡಿಯೂರಪ್ಪ