ಒಳ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನಿಡಿದ ಶಾಸಕ ಅನಿಲ ಬೆನಕೆ :

0

ಬೆಳಗಾವಿ 10: ದಿನಾಂಕ 10.01.2021 ರ ರವಿವಾರದಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರವರು ಆಂಜನೆಯ ನಗರದ ಸೆಕ್ಟರ ನಂ. 8 ರಲ್ಲಿ ಒಳ ಚರಂಡಿ ನಿರ್ಮಾಣ ಕಾಮಗಾರಿಗೆ ಇಂದು ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರು ಆಂಜನೇಯ ನಗರದ ಸೆಕ್ಟರ ನಂ. 8 ರಲ್ಲಿ ಮಹಾನಗರ ಪಾಲಿಕೆ ಅನುದಾನದಲ್ಲಿ ಒಳ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಬರುವ ಕೆಲ ದಿನಗಳಲ್ಲಿ ಆಂಜನೇಯ ನಗರದಲ್ಲಿನ ಎಲ್ಲ ಅಭಿವೃದ್ದಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು. ಇದೇ ಸಂದರ್ಭದಲ್ಲಿ ನಗರದಲ್ಲಿನ ಅಭಿವೃದ್ದಿ ಕಾಮಗಾರಿಗಳ ಕುರಿತು ಅಲ್ಲಿನ ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ, ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಅಭಿಯಂತರ ಬೆಣ್ಣಿ, ಗುತ್ತಿಗೆದಾರ ಎನ್. ಕೆ. ಧಾಮಣೆಕರ ಹಾಗೂ ರಹವಾಸಿಗಳು ಉಪಸ್ಥಿತರಿದ್ದರು.