ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ರೈತ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.

0

ಬೆಳಗಾವಿ :   ಕಾರ್ಮಿಕ, ಕೃಷಿ  ಕಾಯ್ದೆ ವಿರೋಧಿಸಿ ಹಾಗೂ  ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ರೈತ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.

ಮಾನವ ಬಂಧುತ್ವ ವೇದಿಕೆ, ಭಾರತೀಯ ಕೃಷಿಕ ಸಮಾಜ, ರೈತ ಸಂಘಟನೆ, ಎಐಟಿಯುಸಿ, ಸಮಸ್ತ ಲಿಂಗಾಯತ ಹೋರಾಟ ವೇದಿಕೆ, ಕರ್ನಾಟಕ ರಾಜ್ಯ ರೈತ ಸಂಘಟನೆ, ಮಹಿಳಾ ಜಾಗೃತ ವೇದಿಕೆ, ಕೂಲಿ ನೇಕಾರ ಕಾರ್ಮಿಕ ಬಳಗ, ಎಐಯುಟಿಯುಸಿ ಟ್ರೇಡ್ ಯೂನಿಯನ್, ರೈತ ಕೃಷಿ ಸಂಘಟನೆ,

ಸ್ವಾಭಿಮಾನಿ ಶೇತ್ಕರಿ ಸಂಘಟನೆ, ರಾಷ್ಟ್ರವಾದಿ ಕಾಂಗ್ರೆಸ್, ಬಸವ ಭೀಮ ಸೇನೆ ಸೇರಿದಂತೆ ನಾನಾ ಸಂಘಟನೆಗಳ ಕಾರ್ಯಕರ್ತರು ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿ, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ತರಾತುರಿಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಕೃಷಿ, ಕಾರ್ಮಿಕ, ವಿದ್ಯುತ್ ಖಾಸಗೀಕರಣ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ. ಈ ರೀತಿಯ ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ. ಹಾಗಾಗಿ ಕೂಡಲೇ ಈ ಕಾಯ್ದೆಗಳನ್ನು ಹಿಂಪಡೆದುಕೊಳ್ಳಬೇಕು ಎಂದು‌ ಮನವಿ ಮೂಲಕ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಸಿದ್ದಗೌಡ ಮೋದಗಿ, ಅಖಿಲಾ ಪಠಾಣ, ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್,  ಜಿಲ್ಲಾ ಸಂಚಾಲಕಿ ನೇಮಿಚಂದ್ರ, ಮಹಾದೇವಿ ಪಾಟೀಲ್,  ಸೇರಿದಂತೆ ಮುಂತಾದವರು ಇದ್ದರು.