ಸಚಿವರ ಪಟ್ಟಿ ಪ್ರಕಟ ; ಸಿಎಂ

0

ಬೆಂಗಳೂರು, ಜ. 13- ಚುನಾವಣಾ ಪ್ರಚಾರದಲ್ಲಿ ಮುನಿರತ್ನ ಮುಂದಿನ ಮಂತ್ರಿ ಎಂದು ಪ್ರಚಾರ ಮಾಡಿದ್ದ ಸಿಎಂ ಯಡಿಯೂರಪ್ಪ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕರ ಪಟ್ಟಿಯಿಂದ ಅವರ ಹೆಸರನ್ನು ಕೈ ಬಿಟ್ಟಿದ್ದಾರೆ.

ಉಮೇಶ್ ಕತ್ತಿ, ಎಸ್. ಅಂಗಾರ, ಸಿ.ಪಿ. ಯೋಗೇಶ್ವರ್, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಆರ್. ಶಂಕರ್, ಮುರುಗೇಶ್ ನಿರಾಣಿ ಅವರ ಹೆಸರನ್ನು ರಾಜಭವನಕ್ಕೆ ಕಳುಹಿಸಲಾಗಿದ್ದು, ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮಾಧ್ಯಮಗಳಿಗೆ ಸಿಎಂ ಅವರು ತಿಳಿಸಿದ್ದಾರೆ.

ಮುನಿರತ್ನಗೆ ಸಚಿವ ಸ್ಥಾನದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ಯಾವುದೇ ಉತ್ತರ ಕೊಡದೆ ಯಡಿಯೂರಪ್ಪ ಅವರು ಮುಂದೆ ನಡೆದಿದ್ದಾರೆ.