ರಾಮಮಂದಿರ ನಿರ್ಮಾಣಕ್ಕೆ 25 ಲಕ್ಷ ರೂ. ದೇಣಿಗೆ

0

ಧರ್ಮಸ್ಥಳ, ಜ. 14- ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಶ್ರೀ ರಾಮಮಂದಿರಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ ‌ಗೆ 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಿ ವಿ ವೀರೇಂದ್ರ ಹೆಗ್ಗಡೆ ಪ್ರಕಟಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ವರ್ಷಗಳ ನಂತರ ದೇವಾಲಯ ನಿರ್ಮಾಣಕ್ಕಿದ್ದ ದೊಡ್ಡ ಅಡ್ಡಿ ನಿವಾರಣೆ ಯಾಗಿದೆ. ಈ ಬಾರಿ ಶ್ರೀ ರಾಮ ಮಂದಿರದ ನಿರ್ಮಾಣ ನಿಶ್ಚಿತ. ಪೇಜಾವರ ವಿಶ್ವೇಶತೀರ್ಥರ ಸ್ಮರಣಾರ್ಥ ಮತ್ತು ಅವರ ಆಶಯವನ್ನು ಪೂರ್ಣಗೊಳಿಸಲು ನಾವು 25 ಲಕ್ಷ ರೂ. ದೇಣಿಗೆ ನೀಡುತ್ತೇವೆ. ಮಂದಿರ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ಒದಗಿಸಲಿದ್ದೇವೆ ಎಂದು ಹೆಗ್ಗಡೆ ಹೇಳಿದರು.