ಭೀಕರ ರಸ್ತೆ ಅಪಘಾತ: 12 ಜನ ಸಾವು

0

ಧಾರವಾಡ, ಜ. 15- ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ 12 ಜನರು ಮೃತಪಟ್ಟಿರುವ ಘಟನೆ ಧಾರ ವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

 

ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಗೆ ಟಿಪ್ಪರ್‌ವೊಂದು ಡಿಕ್ಕಿ ಹೊಡೆದಿದೆ. 10 ಜನ ಮಹಿಳೆಯರು ಸೇರಿ ಒಟ್ಟು 12 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಟೆಂಪೋ ಟ್ರಾವೆಲರ್‌ ಹಾಗೂ ಟಿಪ್ಪರ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

 

ಧಾರವಾಡದಿಂದ ಸುಮಾರು 8 ಕಿಮೀ ದೂರದಲ್ಲಿರುವ ಇಟ್ಟಿಗಟ್ಟಿ ಬಳಿ ಈ ಅಪಘಾತ ಸಂಭವಿಸಿದೆ. ಗಾಯಗೊಂಡ ಆರು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲು ಹಲವು ಸಮಯದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

 

ಮೃತಪಟ್ಟವರ ವಿವರ;

ಪೂರ್ಣಿಮಾ, ಪ್ರವೀಣಾ, ಪ್ರೀತಿ ರವಿಕುಮಾರ, ಮಾನಸಿ, ಪರಂಜ್ಯೋತಿ, ರಾಜೇಶ್ವರಿ ಶಿವಕುಮಾರ, ಶಕುಂತಲಾ, ಉಷಾ, ವೇದಾ, ನಿರ್ಮಲಾ, ಮಂಜುಳಾ ನಿಲೇಶ, ರಜನಿ ಶ್ರೀನಿವಾಸ ಎಂದು ತಿಳಿದು ಬಂದಿದೆ… ಬೆಳಗಿನ ಜಾವ ಮೂರು ಗಂಟೆಗೆ ದಾವಣಗೆರೆಯಿಂದ ಹೊರಟಿದ್ದ ಟೆಂಪೋ ಧಾರವಾಡದ ಸಮೀಪ ಬಂದಾಗ ಈ ಅಪಘಾತ ನಡೆದಿದೆ.