ವಚನಗಳು ಮನೆ ಮನೆಗೆ ತಲುಪಲಿ: ಶಾಸಕ ಅನಿಲ ಬೆನಕೆ

0

 

ಬೆಳಗಾವಿ, ಜ.15 : 12 ನೇ ಶತಮಾನದಲ್ಲಿ ಅನುಭವ ಮಂಟಪ ಕಟ್ಟಿದ ಬಸವಣ್ಣವರ ವಚಗಳನ್ನು ಮನೆ ಮನೆಗೆ ತಲುಪಿಸುವ ಶ್ರೇಷ್ಠ ಕಾಯಕವನ್ನು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಅವರು ಮಾಡಿದರು. ಅದನ್ನು ಮುಂದುವರೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಅನಿಲ ಬೆನಕೆ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ (ಜ.15) ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಉತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಸವಣ್ಣನವರು ಸಮಾನತೆಯನ್ನು ಬಿತ್ತುವ ಕಾಯಕ ಮೊದಲು ಮಾಡಿದವರು. ಅವರ ವಚನಗಳನ್ನು ಪ್ರತಿ ಮನೆ ಮನೆಗೂ ತಲುಪಿಸಿ ಅರಿವು ಮೂಡಿಸಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಸ್ವಾಮಿಗಳು ನಿಸ್ವಾರ್ಥ ಸೇವೆ ಮಾಡಿದರು.
ವಚನಗಳ ಪ್ರೇರಣೆ ನಮ್ಮೆಲ್ಲರ ಶಕ್ತಿ; ಬದಲಾವಣೆ ಹೊಂದಬೇಕಾದರೆ ಸಮಾನತೆಯ ಪಾತ್ರ ಬಹಳ ಮಹತ್ವದ್ದು ವಚನಗಳ ಅರಿವು ಪಡೆದು ಮತ್ತು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅದನ್ನು ಸಮಾಜದಲ್ಲಿ ಬಿತ್ತರಿಸಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಸ್ವಾಮಿಗಳು ನಡೆದ ದಾರಿಯಲ್ಲಿ ಸಾಗೋಣ ಎಂದು ಶಾಸಕ ಅನಿಲ್ ಬೆನಕೆ ತಿಳಿಸಿದರು.
ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಅವರ ವಚನಗಳು, ಜೀವನ ಚರಿತ್ರೆ, ಸಮಾಜ ಸೇವೆ, ಯೋಗ ಸಾಧನೆ, ಪವಾಡಗಳು ಹಾಗೂ ಲೋಕಕಲ್ಯಾಣಕ್ಕಾಗಿ ಮಾಡಿದ ಅವರ ಕೆಲಸಗಳ ಕುರಿತು ಡಾ. ಮೈತ್ರೇಯಣಿ ಗದಿಗೆಪ್ಪಗೌಡರ ವಿಶೇಷ ಉಪನ್ಯಾಸ ನೀಡಿದರು.
ಬಸವರಾಜ ತಿಮ್ಮಾಪೂರ ಮತ್ತು ಕಲಾವಿದರು ಸಂಗೀತ ಕಾರ್ಯಕ್ರಮ ಪ್ರಸ್ತುತಪಡಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಸ್ವಾಗತಿಸಿದರು. ಸರ್ವಮಂಗಳ ಅರಳಿಮಟ್ಟಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷರಾದ ಕೆ.ಎಸ್. ಮಮದಾಪೂರ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. /////

ಅಂಧ ವಿದ್ಯಾರ್ಥಿಗಂದ ಬ್ರೈಲ್ ಕಿಟ್‍ಗೆ ಅರ್ಜಿ ಆಹ್ವಾನ

ಬೆಳಗಾವಿ, ಜ.15. : 2020-21ನೇ ಸಾಲಿಗೆ ಎಸ್.ಎಸ್.ಎಲ್.ಸಿ ಹಾಗೂ ನಂತರದ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ರೈಲ್ ಕಿಟ್ ಒದಗಿಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಯ ಅಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫೆಬ್ರುವರಿ 13, 2021 ರ ಒಳಗಾಗಿ ಆಯಾ ತಾಲೂಕುಗಳ ತಾಲೂಕು ಪಂಚಾಯತ ಕಛೇರಿಗಳಲ್ಲಿ ಇರುವ ಇಲಾಖೆಯ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಬೆಳಗಾವಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0831-2476096 ಗೆ ಸಂಪರ್ಕಿಸಬಹುದು./////

 

ಬಿ.ಇಡಿ ಕೋರ್ಸಿಗೆ ಅರ್ಜಿ ಆಹ್ವಾನ

ಬೆಳಗಾವಿ, ಜ.15: 2020-21ನೇ ಸಾಲಿನ ಶೈಕ್ಷಣಿಕ ವರ್ಷದ ಎರಡು ವರ್ಷದ ಬಿ.ಇಡಿ ಕೋರ್ಸಿಗೆ ಅರ್ಹ ವಿದ್ಯಾರ್ಥಿಗಳು ಜ.13, 2021 ರಿಂದ ಜ.26, 2021 ರ ವರೆಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಬೆಳಗಾವಿ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ  schooleducation.kar.nic.in ವೆಬ್‍ಸೈಟ್ ಅಥವಾ ನೋಡಲ್ ಅಧಿಕಾರಿಗಳನ್ನು 9535296956 ಅಥವಾ 9448876825 ಸಂಪರ್ಕಿಸಬಹುದು. ////