ಅರ್ಜಿ ಆಹ್ವಾನ

0

ಸಂಗೀತ ನೃತ್ಯ ತರಬೇತಿಗೆ ಪ.ಜಾತಿ ಮತ್ತು ಪ.ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಳಗಾವಿ, ಜ.16: ಗುರು-ಶಿಷ್ಯ ಪರಂಪರೆ ಯೋಜನೆಯಡಿಯಲ್ಲಿ ಪ.ಜಾತಿ ಮತ್ತು ಪ.ಪಂಗಡ ಅಭ್ಯರ್ಥಿಗಳಿಗೆ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನ ಮತ್ತು ಗಮಕ ಕಲಾಪ್ರಕಾರಗಳಲ್ಲಿ ಕಲಿಯಲು ಆಸಕ್ತಿಯುಳ್ಳ, ಅಭ್ಯಾಸ ಮಾಡುತ್ತಿರುವ, ಹೆಚ್ಚಿನ ಅಭ್ಯಾಸ ಮಾಡಲಿಚ್ಚಿಸುವ 14 ರಿಂದ 26 ವರ್ಷ ವಯೋಮಾನದ ಅಭ್ಯರ್ಥಿಗಳಿಗೆ ಮೂರು ತಿಂಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು https//karnatakasangeetanrityaacademy.com ಅಥವಾ ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು ಜ.30 ರ ಒಳಗಾಗಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಕನ್ನಡ ಭವನ 2ನೇ ಮಹಡಿ ಜೆ.ಸಿ.ರಸ್ತೆ ಬೆಂಗಳೂರು-560002 ಇಲ್ಲಿಗೆ ಕಳುಹಿಸಬೇಕು ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರರಾದ ಬನಶಂಕರಿ ವಿ. ಅಂಗಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

 

 

ನಿರುಪಯುಕ್ತ ವಾಹನ ಬಹಿರಂಗ ಹರಾಜು

ಬೆಳಗಾವಿ, ಜ.16: ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ಬೆಳಗಾವಿ ಪ್ರಾದೇಶಿಕ ಕಚೇರಿಯ ನಿರುಪಯುಕ್ತ ವಾಹನ 2002ರ ಮಾದರಿಯ ಕೆಎ01 ಜಿ3935 ಮಹೇಂದ್ರ ಜೀಪ್ ವನ್ನು ಜ.28 ರಂದು ಬೆಳ್ಳಿಗ್ಗೆ 11:30 ಗಂಟೆಗೆ ಟೆಂಡರ್-ಕಂ-ಬಹಿರಂಗ ಹರಾಜು ಕರೆಯಲಾಗಿದೆ.
ಬಹಿರಂಗ ಹರಾಜು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ಬೆಳಗಾವಿ ಪ್ರಾದೇಶಿಕ ಕಚೇರಿ ಆವರಣ ವೀರಭದ್ರ ನಗರ 2ನೇ ಕ್ರಾಸ್ ಬೆಳಗಾವಿಯಲ್ಲಿ ನಡೆಯಲಿದ್ದು, ನಿರುಪಯುಕ್ತ ವಾಹನವನ್ನು ಕಚೇರಿ ಆವರಣದಲ್ಲಿ ಪರಿಶೀಲನೆಗಾಗಿ ಇಡಲಾಗುವುದು. ಕಚೇರಿ ವೇಳೆಯಲ್ಲಿ ನಾ.ಹ.ಜಾ.ನಿ ಪೊಲೀಸ್ ಇನ್ಸ್‍ಪೆಕ್ಟರ್ ಎಸ್.ಕೆ.ಕಾಲೋಜಿ ಅವರನ್ನು ಸಂಪರ್ಕಿಸಿ ಪರಿಶೀಲನೆ ಮಾಡಲು ಅವಕಾಶವಿದೆ ಎಂದು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟೆಣಡರ್ ಮೊಹರು ಮಾಡಿದ ಲಕೋಟಿಯನ್ನು ಪೊಲೀಸ್ ಅಧೀಕ್ಷಕರ ವಿಳಾಸಕ್ಕೆ ಕಳುಹಿಸಬೇಕು. ಲಕೋಟೆಯ ಮೇಲೆ ನಿರುಪಯುಕ್ತ ವಾಹನವನ್ನು ಖರೀದಿಸುವ ಬಗ್ಗೆ ಎಂಬುದನ್ನು ಸ್ಪಷ್ಟವಾಗಿ ಬಿಡಿ ಅಕ್ಷರಗಳಲ್ಲಿ ಬರೆಯಬೇಕು. ಪೂರ್ಣಗೊಳಿಸಿದ ಟೆಂಡರ್‍ಗಳನ್ನು ಜ.25 ರ ಮಧ್ಯಾಹ್ನ 1 ಗಂಟೆ ಒಳಗಾಗಿ ಕಾರ್ಯಾಲಯಕ್ಕೆ ಕಳುಹಿಸಬೇಕು ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ವೇಳೆಯಲ್ಲಿ ಬಂದು ತಿಳಿದುಕೊಳ್ಳಲು ತಿಳಿಸಿದ್ದಾರೆ.////