ಬೆಳಗಾವಿ: ಅಮಿತ್ ಶಾ ವಿರುದ್ಧ ರೈತರ ಪ್ರತಿಭಟನೆ

0

ಬೆಳಗಾವಿ, ಜ. 17- ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಚಳವಳಿ ನಡೆಸುತ್ತಿದ್ದರೂ ಸ್ಪಂದಿಸದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ರೈತರು ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು …

ನಗರಕ್ಕೆ ಭೇಟಿ ನೀಡುತ್ತಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಬಹಿರಂಗ ಚರ್ಚೆಗೆ ಬರುವಂತೆ ಆಗ್ರಹಿಸಿ ಆರಂಭಿಸಿ ದ್ದಾರೆ. ರಾಣಿ ಚನ್ನಮ್ಮ ವೃತ್ತದಲ್ಲಿ ಸೇರಿದ ರೈತ ಮುಖಂಡರು, ಕೇಂದ್ರದ ರೈತ ವಿರೋಧಿ ಧೋರಣೆ ವಿರುದ್ಧ ಧಿಕ್ಕಾರ ಕೂಗಿದರು. ಇಬ್ಬರು ರೈತರು ಅರೆಬೆತ್ತಲೆಯಾಗಿ ಉರುಳು ಸೇವೆ ಮಾಡಿದರು.

ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸುತ್ತಿದ್ದಾರೆ. ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಚಳವಳಿ ತೀವ್ರಗೊಂಡಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಬೇಡಿಕೆ ಈಡೇರಿಸಲು ಕ್ರಮ ವಹಿಸಿಲ್ಲ. ರೈತರ ಭವಿಷ್ಯದ ವಿಷಯದಲ್ಲೂ ಹಟಮಾರಿ ಧೋರಣೆ ಅನುಸರಿಸುತ್ತಿರುವುದು ಖಂಡನೀಯ. ವಿವಾದಿತ ಕಾಯ್ದೆಗಳ ಬಗ್ಗೆ ರೈತರಿಗೆ ಹಲವು ಅನುಮಾನ, ಗೊಂದಲಗಳಿವೆ. ಅವುಗಳನ್ನು ಅಮಿತ್ ಶಾ ಇಲ್ಲಿಗೆ ಬಂದು ಸಂವಾದ ನಡೆಸಿ ಬಗೆಹರಿಸಬೇಕು ಎಂದು ಸಂಚಾಲಕ ಚೂನಪ್ಪ ಪೂಜಾರಿ ಒತ್ತಾಯಿಸಿದರು.

ರೈತರಿಗೆ ಮನವರಿಕೆ ಮಾಡಿಕೊಡಲು ಆಗದಿದ್ದರೆ ಅವರು ಜನರ ಕ್ಷಮೆ ಯಾಚಿಸಬೇಕು. ಬಿಜೆಪಿ ಸಮಾವೇಶದಲ್ಲಿ ಭಾಗವಹಿಸದೆ ವಾಪಸಾಗ ಬೇಕು ಎಂದು ಆಗ್ರಹಿಸಿದರು.

ಗೋ ಬ್ಯಾಕ್ ಅಮಿತ್ ಶಾ ಎಂದು ಘೋಷಣೆ ಕೂಗಿ ಅಕೋಶ ಹೊರ ಹಾಕಿದ ರೈತರು ಕೇಂದ್ರ ಸರ್ಕಾರ ವಿರುದ್ಧ ದಿಕ್ಕಾರ ಕೂಗಿದರು..