ಪ್ರಮುಖ ಖಾತೆ ಮೇಲೆ ನೂತನ ಸಚಿವರ ಕಣ್ಣು; ಆನೆಗುಡ್ಡ ವಿನಾಯಕನ ದರ್ಶನ ಪಡೆದ ಸಿಎಂ

0

 

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಖಾತೆ ಹಂಚಿಕೆ ತಲೆನೋವಾಗಿ ಪರಿಣಮಿಸಿದೆ. ಖಾತೆ ಹಂಚಿಕೆಗೂ ಮುನ್ನ ಸಿಎಂ ಟೆಂಪಲ್ ರನ್ ಆರಂಭಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಇದೀಗ ಆನೆಗುಡ್ಡ ಗಣಪತಿ ದೇವಾಲಕ್ಕೆ ಭೇಟಿ ನೀಡಿದ್ದು, ವಿನಾಯಕನ ದರ್ಶನ ಪಡೆದರು. ಸಹಸ್ರ ನಾರಿಕೇಳ ಹೋಮದಲ್ಲಿ ಕೂಡ ಸಿಎಂ ಪಾಲ್ಗೊಳ್ಳಲಿದ್ದಾರೆ. ಸಿಎಂ ಗೆ ಪುತ್ರ ಬಿ.ವೈ.ರಾಘವೇಂದ್ರ, ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ ಸಾಥ್ ನೀಡಿದ್ದಾರೆ.

ಇನ್ನು ನೂತನ ಸಚಿವ ಪ್ರಮುಖ ಖಾತೆಗಳ ಮೇಲೆ ಕಣ್ಣಿಟ್ಟಿದ್ದು, ಖಾತೆ ಹಂಚಿಕೆಗೂ ಮುನ್ನ ಸಿಎಂ ಟೆಂಪಲ್ ರನ್ ಕುತೂಹಲಕ್ಕೆ ಕಾರಣವಾಗಿದೆ. ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಎಂಟಿಬಿ ನಾಗರಾಜ್ ಗೆ ಪ್ರಮುಖ ಖಾತೆಗಳು ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಯಾರಿಗೆ ಯಾವ ಖಾತೆ ಎಂಬುದರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ