ಸೂರತ್, ಜ. 19- ಟ್ರಕ್ ಹರಿದು 13 ಜನರು ಸಾವಿಗೀಡಾಗಿರುವ ದುರ್ಘಟನೆ ಗುಜರಾತ್ನ ಕೋಸಂಬಾದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.
ಮೃತಪಟ್ಟಿರುವ ಎಲ್ಲರೂ ರಾಜಸ್ಥಾನದಿಂದ ಬಂದಿದ್ದ ವಲಸೆ ಕಾರ್ಮಿಕರು ಆಗಿದ್ದಾರೆ. ಸೋಮವಾರ ರಾತ್ರಿ ಕಾರ್ಮಿಕರು ಫೂಟ್ಪಾತ್ ಮೇಲೆ ನಿದ್ರೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಕಾರ್ಮಿಕರೆಲ್ಲರೂ ರಾಜಸ್ಥಾನದ ಬಾಂಸ್ವಾಡಾ ಮೂಲದವರು ಎಂದು ವರದಿಯಾಗಿದೆ.
ಟ್ರ್ಯಾಕ್ಟರ್ಗೆ ಡಿಕ್ಕಿಯಾಗಿರುವ ಕಬ್ಬು ತುಂಬಿದ್ದ ಟ್ರಕ್, ಚಾಲಕನ ನಿಯಂತ್ರಣಕ್ಕೆ ಸಿಗದೆ ಫೂಟ್ಪಾತ್ ಮೇಲೆ ಸಾಗಿದೆ. ಅಲ್ಲಿ ಮಲಗಿದ್ದವರ ಪೈಕಿ 13 ಜನರು ಮೃತಪಟ್ಟಿದ್ದು, ಗಾಯಗೊಂಡಿರುವ ಆರು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ್ದ ಟ್ರಕ್ ಇದ್ದಕ್ಕಿದ್ದಂತೆ ಪಾದಚಾರಿ ಮಾರ್ಗಕ್ಕೆ ನುಗ್ಗಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಪ್ರಧಾನಿ ಮೋದಿ ತೀವ್ರ ಸಂತಾಪ
ದುರ್ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸೂರತ್ ಟ್ರಕ್ ಅಪಘಾತದಲ್ಲಿ ಹಲವು ಜನರು ಸಾವನ್ನಪ್ಪಿರುವುದು ದುರಂತ. ಮೃತರ ಕುಟುಂಬಸ್ಥರ ಕುರಿತು ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
Recover your password.
A password will be e-mailed to you.