32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2021 ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

0

ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಆವರಣದಲ್ಲಿ ಮಂಗಳವಾರ ಪ್ರಾದೇಶಿಕ ಸಾರಿಗೆ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅಲಯನ್ಸ್ ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಸಹಯೋಗದಲ್ಲಿ 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2021 ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದ`ರ್Àದಲ್ಲಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯ ದೇವರಾಜ ಅರಸ್, ಎಲ್ಲರ ಮನೋ`Áವನೆ ಬದಲಾಗಬೇಕಿದೆ. ಅಪಘಾತದಲ್ಲಿ ಆಗುವ ಅನಾಹುತಗಳಿಗೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹಾಗಾಗಿ ಸಂಚಾರ ನಿಮಯಗಳ ಪಾಲನೆಯೊಂದಿಗೆ ವಾಹನಗಳ ವಿಮೆ ಮತ್ತು ಚಾಲನಾ ಪರವಾನಿಗೆ ಪಡೆದುಕೊಳ್ಳಬೇಕು. ಪ್ರತಿಯೊಬ್ಬರಲ್ಲಿ ಸಂಚಾರ ನಿಯಮಗಳ ಅರಿವು ಮೂಡಬೇಕಿದೆ ಎಂದರು.
ಅಲಯನ್ಸ್ ಕ್ಲನ್‍ನ ನಿರ್ದೇಶಕ, ಹಿರಿಯ ನ್ಯಾಯವಾದಿ ದಿನಕರ್ ಶೆಟ್ಟಿ ಮಾತನಾಡಿ, ಅಪಘಾತಗಳ ಸಂಖ್ಯೆ ಕಡಿಮೆ ಮಾಡಬೇಕಾದರೆ ಸಂಚಾರ ನಿಮಯಗಳ ಪಾಲನೆ ಮಾಡಬೇಕು. ಜನರಲ್ಲಿ ಸಂಚಾರ ನಿಯಮಗಳ ಕುರಿತು ಅರಿವು ಬರಬೇಕು ಎಂದರು.
ಬೆಳಗಾವಿ ವಿ`Áಗದ ಜಂಟಿ ಸಾರಿಗೆ ಆಯುಕ್ತೆ ಎಂ.ಶೋ`Á ಮಾತನಾಡಿ, ಜನರಲ್ಲಿ ಸಂಚಾರ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸುವ ಉz್ದÉೀಶದಿಂದ ಒಂದು ತಿಂಗಳ ಕಾಲ ಮಾಸಾಚರಣೆ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ರಾಜ್ಯ ವಕೀಲರ ಪರಿಷತ್ತಿನ ಅ`À್ಯಕ್ಷ ರವೀಂದ್ರ ತೋಟಗೇರ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್ಮ, ಅಧೀಕ್ಷಕ ಎಸ್.ಕೆ.ಹುಗ್ಗಿ, ಸುಜಯ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.