ಜ.21 ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ

0

ಬೆಳಗಾವಿ, ಜ.19 : ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಗುರುವಾರ (ಜ.21) ಬೆಳಿಗ್ಗೆ 11 ಗಂಟೆಗೆ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಉತ್ಸವ ಏರ್ಪಡಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಇಲಾಖೆ ಸಚಿವರು ಲಕ್ಷ್ಮಣ ಸಂ. ಸವದಿ ಘನ ಉಪಸ್ಥಿತರಿರುವರು.
ಯಕ್ಕುಂಡಿಯ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯರಾದ ಡಾ. ವಾಯ್.ಎಂ. ಯಾಕೊಳ್ಳಿ ಅವರು ಉಪನ್ಯಾಸ ನೀಡಲಿದ್ದು, ಜ್ಯೋತಿ ಬಸವರಾಜ ಕುರೇರ ಮತ್ತು ತಂಡದವರಿಂದ ವಚನ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಮತ್ತು ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಶ್ರೀಮಂತ ಪಾಟೀಲ, ಮಾನ್ಯ ಸಚಿವರಾದ ಉಮೇಶ ಕತ್ತಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಶಾಸಕರು ಅನಿಲ ಎಸ್. ಬೆನಕೆ ಅಧ್ಯಕ್ಷತೆ ವಹಿಸಲಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ್ ಕವಟಗಿಮಠ, ಕರ್ನಾಟಕ ವಿಧಾನ ಸಭೆ ಉಪ ಸಭಾಧ್ಯಕ್ಷರಾದ ವಿಶ್ವನಾಥ ಚ. ಮಾಮನಿ, ನವದೆಹಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಾದ ಶಂಕರಗೌಡ ಐ. ಪಾಟೀಲ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ಶಾಸಕರಾದ ದುರ್ಯೋಧನ ಐಹೊಳೆ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಆಶಾ ಐಹೊಳೆ, ಕರ್ನಾಟಕ ರಾಜ್ಯ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಶಾಸಕರಾದ ಪಿ. ರಾಜೀವ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ಶಾಸಕರಾದ ಮಹೇಶ ಕುಮಠಳ್ಳಿ, ಹಾಗೂ ಜಿಲ್ಲಾ ಗಂಗಾಮತಸ್ಥರ ಸಮಾಜದ ಅಧ್ಯಕ್ಷರಾದ ಗಂಗಾರಾಮ ತಳವಾರ ಉಪಸ್ಥಿತರಿರುವರು ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ. ಹೀರೆಮಠ ಅವರು ತಿಳಿಸಿದ್ದಾರೆ.