ಪೊಲೀಸ್ ಸಬ್ ಇನ್ಸ್‍ಪೆಕ್ಟರ್ (ಸಿವ್ಹಿಲ್) ಸ್ಥಳೀಯ ಮತ್ತು ಮಿಕ್ಕುಳಿದ ವೃಂದದ ಹುದ್ದೆಗಳ ನೇರ ನೇಮಕಾತಿ

0

ಕರ್ನಾಟಕ ರಾಜ್ಯ ಪೊಲೀಸ್ (ISO:9001-2015 ಪ್ರಮಾಣಿತ ನೇಮಕಾತಿ ಪ್ರಕ್ರಿಯೆ)

ಪೊಲೀಸ್ ಸಬ್ ಇನ್ಸ್‍ಪೆಕ್ಟರ್ (ಸಿವ್ಹಿಲ್) ಸ್ಥಳೀಯ ಮತ್ತು ಮಿಕ್ಕುಳಿದ ವೃಂದದ ಹುದ್ದೆಗಳ ನೇರ ನೇಮಕಾತಿ
ದಿನಾಂಕ: 07-05-2020 ರಂದು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟಿಸಲಾದ ಜಾಹಿರಾತನ್ನು ಮುಂದುವರೆಸುತ್ತಾ, ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂಧಗಳ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ & ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್‍ಲೈನ್ (Online) ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ. ಖಾಲಿ ಹುದ್ದೆಗಳ ವರ್ಗೀಕರಣವನ್ನು ಹಾಗೂ ಅರ್ಹತಾ ಷರತ್ತುಗಳಿಗೆ ಅಧಿಕೃತ ವೆಬ್‍ಸೈಟ್ www.recruitment.ksp.gov.in.. ನಲ್ಲಿನ ಅಧಿಸೂಚನೆಯನ್ನು ಗಮನಿಸುವುದು.
1. ಅರ್ಜಿಗಳನ್ನು ಸಲ್ಲಿಸಲು ಅವಧಿ ಮತ್ತು ಶುಲ್ಕವನ್ನು ಪಾವತಿಸುವ ವಿವರಗಳು:
• ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22-01-2021 ಬೆಳಿಗ್ಗೆ 10:00 ಗಂಟೆಗೆ
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-02-2021 ಸಂಜೆ 06:00 ಗಂಟೆಗೆ
• ಅಧಿಕೃತ ಬ್ಯಾಂಕ್ ಶಾಖೆಗಳ /ಅಂಚೆ ಕಛೇರಿಯ ಕಛೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 24-02-2021.
2. ಶುಲ್ಕದ ವಿವರ:
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ) 3(ಬಿ)ಗೆ ಸೇರಿದ ರೂ. 500/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.250/-

ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಅಧಿಕೃತ ವೆಬ್‍ಸೈಟ್    www.recruitment.ksp.gov.in ನಲ್ಲಿ ನೀಡಲಾಗಿರುವ ಅಧಿಸೂಚನೆಯಲ್ಲಿನ ಸೂಚನೆಗಳನ್ನು ಜಾಗರೂಕತೆಯಿಂದ ಓದಿಕೊಳ್ಳುವುದು.