ಅಂಗವಿಕಲರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದ ಶಾಸಕ ಅನಿಲ ಬೆನಕೆ :

0

ಬೆಳಗಾವಿ20: ದಿನಾಂಕ 20.01.2021 ರಂದು ಅಂಗವಿಕಲರಿಗೆ ಸರ್ಕಾರದ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂಗವಿಕಲರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ಇಂದು ಮಹಾನಗರ ಪಾಲಿಕೆಯ ಆವರಣದಲ್ಲಿ ಸರಳ ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು. ಈ ವಿತರಣಾ ಕಾರ್ಯಕ್ರಮವನ್ನು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಪಲಾನುಭವಿಗಳಿಗೆ ಹಂಚಿಕೆ ಮಾಡಿದರು.

ಈ ಸಂದರ್ಭದಲ್ಲಿ ವಾಹನಗಳನ್ನು ವಿತರಿಸಿ ಮಾತನಾಡಿದ ಶಾಸಕರು ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿನ ಅಂಗವಿಕಲರಿಗೆ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಗಿದ್ದು, ಫಲಾನುಭವಿಗಳು ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಸರಳ ಜೀವನವನ್ನು ನಡೆಸಿಕೊಂಡು ಹೋಗಬೇಕು. ಅಂಗವಿಕಲರಿಗೆ ಸರ್ಕಾರದಿಂದ ಬರುವಂತಹ ಎಲ್ಲ ಯೋಜನೆಗಳನ್ನು ತಲುಪಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ನಂತರದಲ್ಲಿ ಫಲನುಭವಿಗಳು ಶಾಸಕರಿಗೆ ಅಭಿನಂದನೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ, ವಿಕಲಚೇತನ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಅಧಿಕಾರಿಗಳು ಹಾಗೂ ಫಲಾನುಭವಿಗಳಾದ ಮುರಘೇಂದ್ರ ಹಿರೇಮಠ, ಸುನೀತಾ ಮಹಾದೇವ ಕರಡಿ, ದಾದಾಸಾಬ ಮಕಾಂದಾರ, ಸಮೀರ ಮುಜಾವರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.