ಡೈನಾಮೈಟ್ ಸ್ಫೋಟ: 15 ಕಾರ್ಮಿಕರ ಸಾವು

0

ಶಿವಮೊಗ್ಗ, ಜ. 22- ಅಬ್ಬಲಗೆರೆ–ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್‌ ಗುರುವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ ಸುಮಾರು 15 ಕಾರ್ಮಿಕರು ಮೃತಪಟ್ಟಿದ್ದಾರೆ.

ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್‌ ಬಾಕ್ಸ್‌ಗಳು ಸ್ಫೋಟಗೊಂಡು ಅನಾಹುತ ಸಂಭವಿಸಿದೆ. ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ಸ್ಥಳದಲ್ಲಿದ್ದ ಯಾರೊಬ್ಬರು ಬದುಕುಳಿದಿರುವ ಸಾಧ್ಯತೆ ಇಲ್ಲ ಎಂದು ಸ್ಥಳೀಯ ನಿವಾಸಿ ನಾಗರಾಜಪ್ಪ ತಿಳಿಸಿದ್ದಾರೆ…

ಭೂಕಂಪನದ ಸಮಯದಲ್ಲೇ ಈ ಘಟನೆ ನಡೆದಿದೆ. ಭೂಮಿ ಕಂಪಿಸಿದಾಗ ಘರ್ಷಣೆಯಿಂದ ಸ್ಫೊಟವಾಗಿರಬಹುದು ಎಂದು ಕೆಲವರು ಹೇಳಿದರೆ, ಸ್ಫೋಟದಿಂದಲೇ ಭೂಕಂಪನದ ಅನುಭವವಾಗಿದ ಎಂದು ಹಲವರು ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಸಂತಾಪ

ಶಿವಮೊಗ್ಗದಲ್ಲಿ ಜೀವಗಳು ಸಾವಿಗೀಡಾಗಿರುವುದು ನೋವು ತಂದಿದೆ. ಅವರ ಕುಟುಂಬಗಳಿಗೆ ಸಂತಾಪ ತಿಳಿಸುವೆ, ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರವು ಸಾಧ್ಯವಾಗುವ ಎಲ್ಲ ರೀತಿಯ ಸಹಕಾರಗಳನ್ನೂ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪರವಾಗಿ ಪ್ರಧಾನ ಮಂತ್ರಿ ಕಾರ್ಯಾಲಯ ಟ್ವಿಟಿಸಿದೆ.

Pained by the loss of lives in Shivamogga. Condolences to the bereaved families. Praying that the injured recover soon. The State Government is providing all possible assistance to the affected: PM @narendramodi

— PMO India (@PMOIndia) January 22, 2021

ಅಬ್ಬಲಗೆರೆ–ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್‌ ಗುರು ವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ ಸುಮಾರು 15 ಕಾರ್ಮಿಕರು ಮೃತಪಟ್ಟಿದ್ದಾರೆ. ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್‌ ಬಾಕ್ಸ್‌ಗಳು ಸ್ಫೋಟಗೊಂಡು ಅನಾಹುತ ಸಂಭವಿಸಿದೆ. ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ.