545 ಪಿ ಏಸ್ ಐ ಹುದ್ದೆಗೆ ಅರ್ಜಿ ಅಹ್ವಾನ

0

ಬೆಂಗಳೂರು, ಜ. 22- ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೊಲೀಸ್ ಸಬ್-ಇನ್ಸ್‍ಪೆಕ್ಟರ್(ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಆನ್‍ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಬೇಕಾಗಿದೆ. ಖಾಲಿ ಹುದ್ದೆಗಳ ವರ್ಗೀಕರಣವನ್ನು ಹಾಗೂ ಅರ್ಹತಾ ಷರತ್ತುಗಳಿಗೆ ಅಧಿಕೃತ ವೆಬ್‍ಸೈಟ್ www.recruitment.ksp.gov.in ನಲ್ಲಿನ ಅಧಿಸೂಚನೆ ಗಮನಿಸ ಬೇಕು.

ಅರ್ಜಿ ಸಲ್ಲಿಸಲು ಫೆಬ್ರವರಿ 22 ಕಡೆಯ ದಿನವಾಗಿದೆ. ಅಧಿಕೃತ ಬ್ಯಾಂಕ್ ಶಾಖೆಗಳ/ಅಂಚೆ ಕಚೇರಿಯ ಕಚೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಫೆ. 24 ಕೊನೆಯ ದಿನಾಂಕವಾಗಿದೆ.

ಸಾಮಾನ್ಯ ವರ್ಗ, ಪ್ರವರ್ಗ 2 (ಎ), 2 (ಬಿ),3 (ಎ), 3 (ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ. 500/- ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ. 250/-ಶುಲ್ಕವಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಅಧಿಕೃತ ವೆಬ್‍ಸೈಟ್ www.recruitment.ksp.gov.in ನಲ್ಲಿ ನೀಡಲಾಗಿರುವ ಅಧಿಸೂಚನೆಯಲ್ಲಿರುವ ಸೂಚನೆಗಳನ್ನು ಜಾಗರೂಕತೆಯಿಂದ ಓದಿಕೊಳ್ಳಬೇಕೆಂದು ಅಧಿಕೃತ ಪ್ರಕಟಣೆ ತಿಳಿಸಿದೆ.