ನ್ನಡ ಧ್ವಜ ತೆರವುಗೊಳಿಸಬೇಕೆಂದು ಪ್ರತಿಭಟನೆಗೆ ಯತ್ನಿಸಿ ಗಡಿಯಲ್ಲಿ ಪುಂಡಾಟ ನಡೆಸಿದ್ದ ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

0

ಬೆಳಗಾವಿ, ಜ. 23- ಬೆಳಗಾವಿ ಮಹಾನಗರ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವುಗೊಳಿಸಬೇಕೆಂದು ಪ್ರತಿಭಟನೆಗೆ ಯತ್ನಿಸಿ ಗಡಿಯಲ್ಲಿ ಪುಂಡಾಟ ನಡೆಸಿದ್ದ ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರ ವಿರುದ್ಧ ಬೆಳಗಾವಿ ಪೋಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಬೆಳಗಾವಿ ಗಡಿ ವಿವಾದ ವಿಷಯದಲ್ಲಿ ಉದ್ಧಟತನ ಮೆರೆದಿದ್ದ ಶಿವಸೇನೆ ಕಾರ್ಯಕರ್ತರ ವಿರುದ್ಧ ಕೊಲ್ಲಾಪುರ ಜಿಲ್ಲೆ ಶಿವಸೇನೆ ಅಧ್ಯಕ್ಷ ವಿಜಯ್ ದೇವಣೆ ಸೇರಿದಂತೆ 8 ಜನರ ವಿರುದ್ಧ ಕಾಕತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಬೆಳಗಾವಿ ಪಾಲಿಕೆ ಎದುರು ಹಾರಿಸಲಾಗಿರುವ ಕನ್ನಡ ಧ್ವಜ ಹಾಗೂ ಧ್ವಜಸ್ತಂಭವನ್ನು ಕೂಡಲೇ ತೆಗೆದು ಹಾಕುವಂತೆ ಒತ್ತಾಯಿಸಿ ಮಹಾರಾಷ್ಟ್ರ ಏಕಿಕರಣ ಸಮಿತಿ (ಎಂಇಎಸ್) ಮತ್ತು ಶಿವಸೇನೆ ಕಾರ್ಯಕರ್ತರು ಗುರುವಾರ ಬೆಳಗಾವಿ ನಗರ ಪಾಲಿಕೆ (ಬಿಸಿಸಿ) ಆವರಣದಲ್ಲಿ ಪ್ರತಿಭಟನೆ ನಡೆಸಲು ಯತ್ನಿಸಿದ್ದರು.