ಜ.27 ಉದ್ಯೋಗ ಮೇಳ

0

ಜ.27 ಉದ್ಯೋಗ ಮೇಳ

ಬೆಳಗಾವಿ, ಜ. 25 : ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜ.27 ರಂದು ಬೆಳಿಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 3:30 ಗಂಟೆಯವರೆಗೆ ಭಾವುರಾವ್ ಕಾಕತ್ಕರ್ ಪದವಿ ಮಹಾವಿದ್ಯಾಲಯ ಕ್ಲಬ್ ರಸ್ತೆ ಬೆಳಗಾವಿಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಪದವಿ (ಇಂಜಿನಿಯರಿಂಗ್ ಪದವಿ ಹೊರತುಪಡಿಸಿ) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ 20ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿವೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು  https://www.sites.google.com/view/ncsjobfair ಈ ವೆಬ್‍ಸೈಟ್‍ಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ಅಥವಾ ಮೊಬೈಲ್ ನಂಬರ್: 9743166178,8867262751 ಅನ್ನು ಸಂಪರ್ಕಿಸಬಹುದು.//.//

 

ಜ.26 ಗಣರಾಜ್ಯೋತ್ಸವ ದಿನಾಚರಣೆ ಧ್ವಜಾರೋಹಣ

ಬೆಳಗಾವಿ, ಜ. 25 : ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಮಂಗಳವಾರ (ಜ.26) ಬೆಳಿಗ್ಗೆ 9 ಗಂಟೆಗೆ ಜಲಸಂಪನ್ಮೂಲ (ಭಾರಿ ಮತ್ತು ಮಧ್ಯಮ ನೀರಾವರಿ) ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಜಿಲ್ಲಾ ಕ್ರೀಡಾಂಗಣ (ಕೆ.ಎಲ್.ಇ.ಕ್ಯಾಂಪಸ್)ದಲ್ಲಿ ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ.
ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಾರಿಗೆ ಇಲಾಖೆ ಸಚಿವರಾದ ಲಕ್ಷ್ಮಣ ಸಂ. ಸವದಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶಶಿಕಲಾ ಅ. ಜೊಲ್ಲೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಶ್ರೀಮಂತ ಪಾಟೀಲ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಉಮೇಶ ವಿ. ಕತ್ತಿ, ಕರ್ನಾಟಕ ವಿಧಾನ ಪರಿಷತ್ತು ಸರ್ಕಾರದ ಮುಖ್ಯ ಸಚೇತಕರು ಮಹಾಂತೇಶ್ ಕವಟಗಿಮಠ, ಕರ್ನಾಟಕ ವಿಧಾನ ಸಭೆ ಉಪ ಸಭಾಧ್ಯಕ್ಷರಾದ ವಿಶ್ವನಾಥ(ಆನಂದ) ಚ. ಮಾಮನಿ, ಅಥಣಿ ಮತ ಕ್ಷೇತ್ರ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಮಹೇಶ ಕುಮಠಳ್ಳಿ, ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರಗೌಡ ಐ. ಪಾಟೀಲ, ರಾಯಬಾಗ ಮತಕ್ಷೇತ್ರ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶಾಸಕರು ದುರ್ಯೋಧನ ಎಂ. ಐಹೊಳೆ, ಕುಡಚಿ ಮತ ಕ್ಷೇತ್ರದ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರು ಪಿ. ರಾಜೀವ, ಜಿಲ್ಲಾಪಂಚಾಯತ್ ಅಧ್ಯಕ್ಷರಾದ ಆಶಾ ಐಹೋಳೆ ಅವರು ಭಾಗವಹಿಸಲಿದ್ದಾರೆ.
ಲೋಕಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ತಾಲೂಕು ಪಂಚಾಯತ್ ಅಧ್ಯಕ್ಷರು, ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು, ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರು, ಪೆÇಲೀಸ್ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು ಉಪಸ್ಥಿತರಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ದಂಡಾಧಿಕಾರಿಗಳಾದ ಎಂ.ಜಿ ಹಿರೇಮಠ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ./////

 

ಜ.27 ರಾಯಬಾಗ, ಬೋರಗಾವ ನೂತನ ಬಸ್ ನಿಲ್ದಾಣ ಉದ್ಘಾಟನೆ

ಬೆಳಗಾವಿ, ಜ. 25 : ಚಿಕ್ಕೋಡಿ ವಿಭಾಗದ ರಾಯಬಾಗ ನೂತನ ಬಸ್ ನಿಲ್ದಾಣದ ಉದ್ಘಾಟನಾ ಹಾಗೂ ಚಾಲಕರಿಗೆ ಬೆಳ್ಳಿ ಪದಕ ವಿರತಣಾ ಸಮಾರಂಭವನ್ನು ಜ.27 ರಂದು ಬೆಳಿಗ್ಗೆ 11.00 ಗಂಟೆಗೆ ಹಾಗೂ ಬೋರಗಾವ ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭವನ್ನು ಮದ್ಯಾಹ್ನ 3.00 ಗಂಟೆಗೆ ಹಮ್ಮಿಕೊಳ್ಳಲಾಗಿದೆ
ಉದ್ಘಾಟನಾ ಹಾಗೂ ಚಾಲಕರಿಗೆ ಬೆಳ್ಳಿ ಪದಕ ವಿತರಣಾ ಸಮಾರಂಭವನ್ನು ಉಪಮುಖ್ಯಮಂತ್ರಿಗಳು, ಮತ್ತು ಸಾರಿಗೆ ಇಲಾಖೆ, ಸಚಿವರಾದ ಲಕ್ಷ್ಮಣ ಸಂ. ಸವದಿ ನೆರವೇರಿಸಲಿದ್ದಾರೆ.
ಸಭೆಯಲ್ಲಿ ರಮೇಶ ಲ.ಜಾರಕಿಹೊಳಿ ಜಲಸಂಪನ್ಮೂಲ (ಭಾರಿ ಮತ್ತು ಮಧ್ಯಮ ನೀರಾವರಿ) ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು ಶಶಿಕಲಾ ಜೊಲ್ಲೆ, ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮಂತ ಪಾಟೀಲ ಮತ್ತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಉಮೇಶ. ವ್ಹಿ,ಕತ್ತಿ ಹಾಗೂ ರಾಯಬಾಗ ಮತಕ್ಷೇತ್ರ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶಾಸಕರಾದ ದುರ್ಯೋಧನ ಎಂ. ಐಹೊಳೆ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿವಿಧ ಜನಪ್ರತಿನಿಧಿಗಳು ಉಪಸ್ಥಿತರಿರುತ್ತಾರೆ ಎಂದು ವಾ.ಕ.ರ.ಸಾ.ಸಂಸ್ಥೆ, ಚಿಕ್ಕೋಡಿ ವಿಭಾಗೀಯ ನಿಯಂತ್ರಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////