ಅರ್ಜಿ ಆಹ್ವಾನ

0

ನಾರಿಶಕ್ತಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೆಳಗಾವಿ, ಜ. 27 : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ (ಮಾರ್ಚ-08)ಯ ಅಂಗವಾಗಿ ಕೇಂದ್ರ ಸರ್ಕಾರವು ಪ್ರಧಾನ ಮಾಡುವ “ನಾರಿಶಕ್ತಿ” ಪ್ರಶಸ್ತಿಯನ್ನು ನೀಡಲು ಮಹಿಳಾ ಅಭಿವೃಧ್ಧಿ ಕ್ಷೇತ್ರದಲ್ಲಿ ಸಾಧನೆಗೈದಿರುವ ಅರ್ಹ ಮಹಿಳೆಯರಿಂದ ಹಾಗೂ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮತ್ತು ನಾರಿಶಕ್ತಿ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ವೆಬ್‍ಸೈಟ್  www.narishaktipuraskar.wcd.gov.in ನಲ್ಲಿ ಜ.31 ರೊಳಗೆ ಅರ್ಜಿಗಳನ್ನು ಸಲ್ಲಿಸುವುದು. ಸದರಿ ವೆಬ್ ಸೈಟನಲ್ಲಿ ನೋಡಲು ಕೋರಿದೆ..///

ಯುವಜನ ಸಂಘ ಸಂಸ್ಥೆಗಳಿಗೆ ನೋಂದಾವಣೆ ಮಾಡಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬೆಳಗಾವಿ, ಜ. 27 : 2020-21ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯವಜನ ಸಂಸ್ಥೆಗಳಿಗೆ ನೋಂದಾವಣೆ ಮಾಡಲು ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ, ಕ್ರೀಡಾ, ಸಾಂಸ್ಕøತಿಕ ಹಾಗೂ ಸಮುದಾಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ 15 ರಿಂದ 29 ವರ್ಷ ವಯೋಮಿತಿಯ ಯುವಜನರನ್ನು ಹೊಂದಿದ ಹಾಗೂ ಹೊಸದಾಗಿ ನೋಂದಾವಣೆಗೊಂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘ ಸಂಸ್ಥೆಗಳು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಫೆಬ್ರವರಿ 1ರ ಒಳಗಾಗಿ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಬೆಳಗಾವಿ ಇವರ ಕಛೇರಿಗೆ ಸಲ್ಲಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ./////

 

ಪ್ರತಿಭಾವಂತ ಕ್ರೀಡಾಪಟುಗಳಿಗೆ ನೋಂದಾಯಿತ ಕ್ರೀಡಾ ವಿಜ್ಞಾನ ಸಂಸ್ಥೆಗಳಲ್ಲಿ ಸೇವೆಯನ್ನು ಪಡೆಯಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬೆಳಗಾವಿ, ಜ. 27 : 2020-21ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರತಿಭಾವಂತ ಕ್ರೀಡಾಪಟುಗಳಿಗೆ ನೋಂದಾಯಿತ ಕ್ರೀಡಾ ವಿಜ್ಞಾನ ಸಂಸ್ಥೆಗಳಲ್ಲಿ ಸೇವೆಯನ್ನು ಪಡೆಯಲು ಸಹಾಯಧನ ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹಿಂದಿನ ಮೂರು ಕ್ಯಾಲೆಂಡರ್ ವರ್ಷಗಳಲ್ಲಿ ನಿರಂತರವಾಗಿ ಅಂತರರಾಷ್ಟ್ರೀಯ, ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲ್ಲಿ ಅಥವಾ ರಾಜ್ಯ ಮಟ್ಟದ/ಅಂತರರಾಜ್ಯ/ಅಂತರ-ವಿಶ್ವವಿದ್ಯಾಲಯ/ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸಾಧನೆ ಮಾಡಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಕ್ರೀಡಾಪಟುಗಳು (ವಿಕಲಚೇತನ ಕ್ರೀಡಾಪಟುಗಳೂ ಸೇರಿದಂತೆ) ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಫೆಬ್ರವರಿ 1ರ ಒಳಗಾಗಿ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಬೆಳಗಾವಿ ಇವರ ಕಛೇರಿಗೆ ಸಲ್ಲಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.//…//