ಬೆಳಗಾವಿ, ಜ. 28- ಸಾಲಕ್ಕೆ ಹೆದರಿ ಒಂದೇ ಕುಟುಂಬದ ನಾಲ್ವರು ರೈಲು ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ತಡ ರಾತ್ರಿ ಜಿಲ್ಲೆಯ ರಾಯಬಾಗ ಬಳಿ ನಡೆದಿದೆ.
ಮೃತಪಟ್ಟವರನ್ನು ರಾಯಬಾಗ ತಾಲ್ಲೂಕಿನ ಭಿರಡಿ ಗ್ರಾಮದವರು ಎಂದು ಗುರುತಿಸಲಾಗಿದೆ.
ಸಾತಪ್ಪ ಅಣ್ಣಪ್ಪ ಸುತಾರ (60), ಪತ್ನಿ ಮಹಾದೇವಿ ಸಾತಪ್ಪ ಸುತಾರ (50) ಹಾಗೂ ಮಕ್ಕಳಾದ ಸಂತೋಷ ಸಾತಪ್ಪ ಸುತಾರ (26), ದತ್ತಾತ್ರೇಯ ಸಾತಪ್ಪ ಸುತಾರ (28) ಮೃತಪಟ್ಟಿದ್ದಾರೆ..
ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ತಿಳಿಸಿದ್ದಾರೆ.
ನಿನ್ನೆ ರಾತ್ರಿ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ರಾಯಬಾಗ ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನ ರವಾನೆ ಮಾಡಲಾಗಿದೆ ಪೊಲೀಸರು ತಿಳಿಸಿದ್ದಾರೆ.