ಅಥಣಿಯಲ್ಲಿ ಸರ್ಕಾರಿ ಪ್ರೌಢಶಾಲೆ ನಿರ್ಮಾಣಕ್ಕೆ ಕನ್ನಡಪರ ಕಾರ್ಯಕರ್ತರ ಮನವಿ

0

ಅಥಣಿ:  ಪಟ್ಟಣಕ್ಕೆ ಬುಧವಾರ ಭೇಟಿ ನೀಡಿದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಅವರನ್ನು ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಂಡರು.

ಪಟ್ಟಣದಲ್ಲಿ ಯಾವುದೇ ಸರ್ಕಾರಿ ಪ್ರೌಢಶಾಲೆ ಇಲ್ಲ. ಕೂಡಲೇ ಸರ್ಕಾರಿ ಪ್ರೌಢಶಾಲೆ ನಿರ್ಮಾಣಕ್ಕೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಕನ್ನಡಪರ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದರು. ಇನ್ನಿತರ ವಿಷಯಗಳ ಕುರಿತು ಅಧ್ಯಕ್ಷರೊಂದಿಗೆ ಚರ್ಚಿಸಲಾಯಿತು.

ಕಾಲಕಾಲಕ್ಕೆ ಗಡಿಭಾಗಕ್ಕೆ ಭೇಟಿ ನೀಡಿ, ಮೂಲಭೂತ ಸೌಕರ್ಯ ಗಳ ಕೊರತೆ ಯ ಬಗ್ಗೆ ಪಟ್ಟಿ  ಮಾಡಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು. ಅಥಣಿ ಸೇರಿ ಇನ್ನಿತರ ಅಗತ್ಯ ಸ್ಥಳಗಳಲ್ಲಿ ಸರ್ಕಾರಿ ಪ್ರೌಢಶಾಲೆ ನಿರ್ಮಿಸಲು ಹಾಗೂ ಶಾಲೆಗಳನ್ನು ದುರಸ್ತಿಗೊಳಿಸಲು ಮುಂಬರುವ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಂತ್ರಿಗಳ ಮೇಲೆ ಒತ್ತಡ ಹೇರಲಾಗುವುದು ಎಂದು ಅವರು ಹೇಳಿದರು.

ಪ್ರಭು ಚನ್ನಬಸವ ಸ್ವಾಮೀಜಿ, ಮುದಗಲ್ ಮಹಾಂತ ಸ್ವಾಮಿಗಳು, ಗಡಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಇನ್ನಿತರರು ಇದ್ದರು.