ಫೆ. 1 ರಿಂದ ಬೆಳಗಾವಿ ಜಿಲ್ಲೆಯ ಸುಪ್ರಸಿದ್ಧ ಮಂದಿರಗಳಾದ ಸವದತ್ತಿ ರೇಣುಕಾ ಯಲ್ಲಮ್ಮ ಹಾಗೂ ಚಿಂಚಲಿ ಮಾಯಕ್ಕ ದೇವಸ್ಥಾನಗಳು ಓಪನ್

0

ಬೆಳಗಾವಿ : ಫೆ. 1 ರಿಂದ  ಬೆಳಗಾವಿ ಜಿಲ್ಲೆಯ ಸುಪ್ರಸಿದ್ಧ ಮಂದಿರಗಳಾದ ಸವದತ್ತಿ ರೇಣುಕಾ ಯಲ್ಲಮ್ಮ ಹಾಗೂ ಚಿಂಚಲಿ ಮಾಯಕ್ಕ ದೇವಸ್ಥಾನಗಳು  ಓಪನ್ ಆಗಲಿದ್ದು,  ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ.

ಕೊರೊನಾ ಹಿನ್ನಲೆಯಲ್ಲಿ ಎರಡು ದೇವಸ್ಥಾನಗಳಲ್ಲಿ ಕಳೆದ ಒಂದು ವರ್ಷದಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ.  ಈಗ ಫೆ.1 ರಿಂದ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.

ಪ್ರಸಿದ್ಧ ಮಂದಿರದಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಲು ಬೆಳಗಾವಿ ಜಿಲ್ಲಾಡಳಿತ ಚಿಂತನೆ ನಡೆಸಿದ್ದು, ನಾಳೆ ಈ ಕುರಿತು ಜಿಲ್ಲಾಡಳಿತ ಅಧಿಕೃತ ಆದೇಶ ಹೊರಡಿಸುವ ನೀರಿಕ್ಷೆ ಇದೆ.

ಮಹಾರಾಷ್ಟ್ರ, ಗೋವಾ ರಾಜ್ಯಗಳಿಂದ ದಿನನಿತ್ಯ ಸಾವಿರಾರು ಭಕ್ತರು ಬರುತ್ತಿದ್ದರು.  ವರ್ಷದ ಬಳಿಕ ಈ ಎರಡೂ ದೇವಸ್ಥಾನಗಳಲ್ಲಿ ದರ್ಶನದ ಭಾಗ್ಯ ಮತ್ತೆ ಬರಲಿದೆ.